ಬಾಗಲಕೋಟೆ: ಜನಗಣತಿ ದೇಶದ ಅಭಿವೃದ್ಧಿ ಯೋಜನೆಗಳಿಗೆ ಪ್ರಮುಖ ಆಧಾರ ಆಗಿರುವುದರಿಂದ ಮಾಹಿತಿ ಸಂಗ್ರಹಣೆಯಲ್ಲಿ ಯಾವುದೇ ತಪ್ಪು ನಡೆಯದಂತೆ ಜಾಗೃತೆ ವಹಿಸಬೇಕು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲೆಯಲ್ಲಿ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ನಿಖರವಾಗಿ ನಡೆಸುವ ಉದ್ದೇಶದಿಂದ ಸೋಮವಾರದಿಂದ ಹಮ್ಮಿಕೊಂಡಿರುವ ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತರಬೇತಿ ಕಾರ್ಯಾಗಾರದಲ್ಲಿ ಸಂಪೂರ್ಣವಾಗಿ ಮಾಹಿತಿ ಪಡೆದುಕೊಳ್ಳಬೇಕು. ಅದನ್ನು ಗಣತಿ ಸಂದರ್ಭದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಚುನಾವಣೆ ಕಾರ್ಯ, ಮಹತ್ವಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕಾಗುತ್ತದೆ. ಅಭಿವೃದ್ಧಿ ಸೂಚ್ಯಂಕ ತೋರಿಸಲು ಅಂಕಿ–ಅಂಶಂಗಳು ಅಗತ್ಯವಾಗಿ ಬೇಕಾಗುತ್ತದೆ. ಯೋಜನೆಗಳನ್ನು ಗುರುತಿಸಲು ಜನಗಣತಿ ಬಹಳ ಮಹತ್ವದ್ದಾಗಿದೆ. ಸರಿಯಾದ ಮಾಹಿತಿ ಸಂಗ್ರಹಿಸದಿದ್ದರೆ, ಅಭಿವೃದ್ದಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಜನರ ಅಭಿವೃದ್ದಿಗಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯ ದೃಷ್ಟಿಯಿಂದ ಸಮೀಕ್ಷೆಯ ದತ್ತಾಂಶಗಳು ಬೇಕಾಗುತ್ತದೆ. ಜನಗಣತಿ ಪ್ರಕ್ರಿಯೆಯಲ್ಲಿ ಮನೆ, ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕಾಗುತ್ತದೆ. ನೀವು ಸಂಗ್ರಹಿಸಿದ ಮಾಹಿತಿ ಮುಂದಿನ 5 ವರ್ಷ ಇಲ್ಲವೇ 10 ವರ್ಷಗಳವರೆಗೆ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ ಎಂದರು.

ಜನಗಣತಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶಕ್ತಿಕುಮಾರ ಮಾತನಾಡಿ, ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಜನಗಣತಿ ಕಾರ್ಯ ನಡೆಸಲಾಗುತ್ತಿದೆ. ತರಬೇತಿ ಕಾರ್ಯಾಗಾರದಲ್ಲಿ ಜನಗಣತಿ ಪ್ರಕ್ರಿಯೆ, ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ವಿಧಾನ, ಡಿಜಿಟಲ್ ಸಾಧನಗಳ ಬಳಕೆ ಹಾಗೂ ಮಾಹಿತಿ ದಾಖಲಿಸುವ ಕ್ರಮಗಳ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಜನಗಣತಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಶಮಕುಮಾರ ಎಸ್.ಬಿ, ತರಬೇತಿ ಜಿಲ್ಲಾ ನೋಡಲ್ ಅಧಿಕಾರಿ ಸುಶೀಲಕುಮಾರ ಶರ್ಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.