ಬಾಗಲಕೋಟೆ: ವೈಜ್ಞಾನಿಕ ಬೆಲೆ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ರೈತರ ಮನವೊಲಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.

ಬುಧವಾರ ಬೆಳಿಗ್ಗೆಯಿಂದಲೇ ಮುದೋಳದಲ್ಲಿರುವ ಜಿಲ್ಲಾಧಿಕಾರಿ ಸಂಗಪ್ಪ, ರೈತ ಮುಖಂಡರು ಹಾಗೂ ಕಾರ್ಖಾನೆಯ ಪ್ರತಿನಿಧಿಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರು. ಆದರೆ, ಯಾವುದೇ ನಿರ್ಣಯಕ್ಕೆ ಬರಲಾಗಲಿಲ್ಲ ಎಂದು ಮೂಲಗಳು ತಿಳಿಸಿವೆ

ಮುಧೋಳ ತಾಲ್ಲೂಕಿನ ವಿವಿಧೆಡೆ ಬುಧವಾರ ಬೆಳಿಗ್ಗೆ ದಿಡೀರ್ ರಸ್ತೆ ತಡೆ ನಡೆಸಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು.

ಶಾಲಾ, ಕಾಲೇಜು, ಪರೀಕ್ಷೆಗೆ ಹೋಗಬೇಕಾಗಿದ್ದ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳಬೇಕಿದ್ದ ನೌಕರರು, ಮದುವೆ, ಆಸ್ಪತ್ರೆಗೆ ತೆರಳುತ್ತಿದ್ದ ಸಾರ್ವಜನಿಕರು ತೊಂದರೆ ಎದುರಿಸಿದರು.

ಬಾಗಲಕೋಟ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬುಧವಾರ ನಡೆಯಬೇಕಿದ್ದ ಎಂಬಿಎ ಪರೀಕ್ಷೆಯನ್ನು ಮುಂದೂಡಲಾಯಿತು. ಬಂದ್ನಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದರೂ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು.

‘ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವ ಬಗ್ಗೆ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇನೆ. ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.