ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಅಂಜುಮನ್ ನಬಿವಾಲೆ ನಿಧನ

Last Updated 16 ಮೇ 2021, 6:58 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೈನುದ್ದೀನ್ ನಬಿವಾಲೆ (57) ಭಾನುವಾರ ಬೆಳಿಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ನಿಧನರಾದರು.

ಕೋವಿಡ್ ಸೋಂಕಿಗೆ ತುತ್ತಾಗಿ 10 ದಿನಗಳ ಹಿಂದೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ನಬಿವಾಲೆ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.

ನಬಿವಾಲೆ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನವನಗರದ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಬಾಗಲಕೋಟೆಯ ಮುಸ್ಲಿಂ ಸಮಾಜದ ಪ್ರಮುಖರಾಗಿದ್ದ ಮೈನುದ್ದೀನ್ ನಬಿವಾಲೆ, ಈ ಹಿಂದೆ ಬಾಗಲಕೋಟೆ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT