ಭಾನುವಾರ, ಫೆಬ್ರವರಿ 28, 2021
31 °C

ಬಾಗಲಕೋಟೆ: ಕಿರುತೆರೆ ನಟಿ ರಂಜನಿ ರಾಘವನ್‌ರಿಂದ ಮತಯಾಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕಿರು ತೆರೆ ನಟಿಯರ ಆಗಮನ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ  ಪಂಚಾಯಿತಿ ಚುನಾವಣೆ ರಂಗೇರುತ್ತಿದೆ.

ನಾಳೆ ಗ್ರಾಮ ಪಂಚಾಯಿತಿ ಚುನಾವಣೆಯ ಪ್ರಚಾರಕ್ಕೆ ಕಿರಿತೆರೆಯ ಪುಟ್ಟಗೌರಿ ಮದುವೆ ಧಾರವಾಹಿಯ ನಟಿ ರಂಜನಿ ರಾಘವನ್ ಆಗಮಿಸಿ ಮತಯಾಚಿಸಲಿದ್ದಾರೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರದಲ್ಲಿ ವಿಜಯಲಕ್ಷ್ಮಿ ಹೂಗಾರ, ಯಂಕಪ್ಪ ನುಚ್ಚಿನ ಹಾಗೂ ಬಿ.ಎನ್. ಮೇತ್ರಿ ಪರ ಪ್ರಚಾರ ನಡೆಸಲಿದ್ದಾರೆ.
ಒಟ್ಟು 19 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, ಇನ್ನುಳಿದ 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮೂವರು ಅಭ್ಯರ್ಥಿಗಳ ಪರವಾಗಿ ಕಿರಿತೆರೆ ತಾರೆ ನಾಳೆ ಪ್ರಚಾರ ನಡೆಸಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು