ರಾಂಪುರ: ‘ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಶಕ್ತಿ ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಟ್ಟಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಉಮೇಶ ಮೇಟಿ ಅವರನ್ನು ಗೆಲ್ಲಿಸಿ’ ಎಂದು ಸಚಿವ ಎಚ್.ಕೆ.ಪಾಟೀಲ ಮನವಿ ಮಾಡಿದರು.

ಬಾಗಲಕೋಟೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಪರ ಬೆನಕಟ್ಟಿ, ಹಳ್ಳೂರ ಗ್ರಾಮಗಳಲ್ಲಿ ಶನಿವಾರ ಮತಯಾಚನೆ ಮಾಡಿದರು.

‘ದಿವಂಗತ ಎಚ್.ವೈ.ಮೇಟಿ ಅವರು ಬಾಗಲಕೋಟೆ ಮತಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದರು. ಕ್ಷೇತ್ರ ವ್ಯಾಪ್ತಿಯ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕೆನ್ನುವುದು ಅವರ ಹಂಬಲವಾಗಿತ್ತು. ಹಳ್ಳಿ ಜನರ ಬಗ್ಗೆ ಅಪಾರ ಕಳಕಳಿ, ಪ್ರೀತಿ, ವಿಶ್ವಾಸ ಹೊಂದಿದ್ದ ಅವರಂತೆ ಅವರ ಪುತ್ರ ಉಮೇಶ ಕೂಡ ಎಲ್ಲರೊಂದಿಗೂ ಸ್ನೇಹಜೀವಿಯಾಗಿದ್ದಾರೆ. ಉಮೇಶ ಮೇಟಿ ಅವರನ್ನು ಗೆಲ್ಲಿಸುವ ಮೂಲಕ ದಿ. ಎಚ್.ವೈ. ಮೇಟಿ ಅವರ ಕನಸು ಸಾಕಾರಗೊಳಿಸಬೇಕು’ ಎಂದು ಮನವಿ ಮಾಡಿದರು.

ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ‘ಗ್ರಾಮೀಣ ಭಾಗದ ಎಲ್ಲೆಡೆ ಕಾಂಗ್ರೆಸ್ ಪರವಾಗಿ ಅಪಾರ ಬೆಂಬಲ ವ್ಯಕ್ತವಾಗುತ್ತಿದ್ದು, ಉಮೇಶ ಮೇಟಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ. ಯುವಕರಾಗಿರುವ ಅವರಿಗೆ ಜನಸೇವೆ ಮಾಡಲು ಮತದಾರರು ಬೆಂಬಲಿಸಬೇಕು’ ಎಂದರು.

ಮಾಜಿ ಸಚಿವ ಅಜಯಕುಮಾರ ಸರನಾಯಕ, ಮುಖಂಡರಾದ ವಕೀಲ ಎಸ್.ಕೆ.ಯಡಹಳ್ಳಿ, ಎಂ.ಎಲ್.ಕೆಂಪಲಿಂಗನ್ನವರ, ಜಿ.ಡಿ.ದೇಸಾಯಿ, ಜಿಲ್ಲಾ ಕೆಡಿಪಿ ಸದಸ್ಯ ಜಿ.ಆರ್.ಪಾಟೀಲ, ರಮೇಶ ಬದ್ನೂರ, ಮುತ್ತು ದೇಸಾಯಿ, ವಿ.ಡಿ.ದೇಸಾಯಿ, ಎಸ್.ಎಸ್.ಪುಣೇಕರ, ಎ.ಎಸ್.ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-19-1359335514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.