ಬಾಗಲಕೋಟೆ: ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ. ಚುನಾವಣೆಯಲ್ಲಿ ಧರ್ಮದ ಗೆಲುವು ನಿಶ್ವಿತ ಎಂದು ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವೀರಣ್ಣ ಚರಂತಿಮಠ ಶಾಸಕರಾಗಿದ್ದ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿ ಹೊಂದಿದ್ದು, ನಗರ ಸ್ವಚ್ಚತೆ, ಸುಂದರ ನಗರವನ್ನಾಗಿ ಮಾಡಿ ಮಾದರಿ ಕ್ಷೇತ್ರವನ್ನಾಗಿಸಿದ್ದರು. ಮುಳಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿದರು ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಹೆ ಕಾಲೇಜು ಆರಂಭಿಸಿದರು. 145 ದೇವಸ್ಥಾನಗಳ ಜೀರ್ಣೋದ್ದಾರ ಕೆಲಸ ಮಾಡಿದ್ದಾರೆ, 3,744 ಮನೆಗಳ ನಿರ್ಮಾಣ ಮಾಡುವ ಮೂಲಕ ವಸತಿ ಸೌಲಭ್ಯ ಕಲ್ಪಿಸಿದ್ದಾರೆ. ಅಭಿವೃದ್ಧಿಯೊಂದೇ ಅವರ ಮಂತ್ರವಾಗಿದೆ ಎಂದು ತಿಳಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಬಸವರಾಜ ಕಟಗೇರಿ ಮಾತನಾಡಿ, ಬಾಗಲಕೋಟೆ ಹಿಂದುತ್ವದ ನೆಲ. ಪ್ರಧಾನ ನರೇಂದ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಹೊಂದುತ್ತಿದೆ. ಬಾಗಲಕೋಟೆಗೆ ಅಭಿವೃದ್ಧಿ ಪರ ಕೆಲಸ ಮಾಡುವ ಶಾಸಕರ ಅವಶ್ಯಕತೆ ಇದೆ,. ಮತ್ತೊಮ್ಮೆ ಬಿಜೆಪಿ ಗೆಲ್ಲಿಸೋಣ ಎಂದರು.

ಚುನಾವಣಾ ಉಸ್ತುವಾರಿ ಅರುಣ ಶಹಾಪುರ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಅರುಣ ಲೋಕಾಪುರ, ಲಕ್ಷ್ಮೀ ನಾರಾಯಣ ಕಾಸಟ್, ವಿಜಯ ಅಂಗಡಿ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-19-1698065078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.