ಬಾಗಲಕೋಟೆ: ಜಲಜೀವನ್ ಮಿಷನ್ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಅಡಿಯಲ್ಲಿ ತಾಲ್ಲೂಕಿನ ಬೆಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಇಲಾಳ ಹಾಗೂ ತಳಗಿಹಾಳ ಗ್ರಾಮಗಳನ್ನು 24x7 ನಿರಂತರ ಕುಡಿಯುವ ನೀರು ಸರಬರಾಜು ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದ ಮೇರೆಗೆ ಬಾಗಲಕೋಟೆ ತಾಲ್ಲೂಕಿನ ಬೆಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಇಲಾಳ ಹಾಗೂ ತಳಗಿಹಾಳ ಗ್ರಾಮಗಳನ್ನು 24x7 ನಿರಂತರ ಕುಡಿಯುವ ನೀರು ಸರಬರಾಜು ಗ್ರಾಮವೆಂದು ಆ. 30ರಂದು ಘೋಷಣೆ ಮಾಡಲಾಗಿದ್ದು, ಇದರಿಂದಾಗಿ ನಿರಂತರ ಕುಡಿಯುವ ನೀರು ಸರಬರಾಜು ಗ್ರಾಮಗಳೆಂದು ಜಿಲ್ಲೆಯಲ್ಲಿ ಘೋಷಣೆಯಾದ ಮೂರು ಮತ್ತು ನಾಲ್ಕನೇ ಗ್ರಾಮಗಳಾಗಿವೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ, ಈ ಸಂದರ್ಭದಲ್ಲಿ ಮಾತನಾಡಿ, ಎರಡೂ ಗ್ರಾಮದಲ್ಲಿ 24x7 ಕುಡಿಯುವ ನೀರು ಸರಬರಾಜು ಆಗುತ್ತಿರುವುದಿಂದ ನೀರಿನ ಮಿತ ಬಳಕೆ, ನೀರಿನ ಗುಣಮಟ್ಟ, ಕಾರ್ಯಾಚರಣೆ ನಿರ್ವಹಣೆ ಕುರಿತು ಗ್ರಾಮಸ್ಥರ ಮೇಲ್ವಿಚಾರಣೆಯಲ್ಲಿ ನಿರ್ವಹಿಸುವಂತೆ ತಿಳಿಸಿದರು.

ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಮಲ್ಲನಗೌಡ ಬಿರಾದಾರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಕೆ. ಹುಬ್ಬಳ್ಳಿ, ಫೀಡ್ ಬ್ಯಾಕ್ ಫೌಂಡೇಶನ್ ರಾಜ್ಯ ಸಮಾಲೋಚಕ ನಂದಕುಮಾರ್, ಗ್ರಾಮ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಶಾಖಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಯೋಜನಾ ವ್ಯವಸ್ಥಾಪಕ ಪರಶುರಾಮ ಗಾಣಿಗೇರ, ಡಿ.ಟಿ.ಎಸ್.ಯು ಸಮಾಲೋಚಕರು, ಪಂಚಾಯತಿ ಸಿಬ್ಬಂದಿ, ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.