ರಾಂಪುರ: ಬಾಗಲಕೋಟೆ ತಾಲ್ಲೂಕಿನ ಕಿರಸೂರ ಗ್ರಾಮದ ಗೌರಿಶಂಕರ ಸ್ವಾಮೀಜಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಮಹಾರಥೋತ್ಸವ ನಡೆಯಿತು.

ಭಗವತಿ, ಹಳ್ಳೂರ, ಭೈರಮಟ್ಟಿ, ಶಿರೂರ, ಬೇವೂರು, ಮಣ್ಣಿಕಟ್ಟಿ, ಮುಗಲೊಳ್ಳಿ, ಕಮತಗಿ, ಹೊಣ್ಣಾಕಟ್ಟಿ, ಬದಾಮಿ, ರಾಮದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗಿಗಳಾಗಿ ರಥಕ್ಕೆ ಹೂವು, ಹಣ್ಣು, ಪಳಾರ ಸಮರ್ಪಿಸಿ ನಮಿಸಿದರು.

ಬೆಳಿಗ್ಗೆ ಗೌರಿಶಂಕರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಕಲ ವಾದ್ಯ ವೈಭವದೊಂದಿಗೆ ಪಲ್ಲಕ್ಕಿ, ಕಳಸದ ಮೆರವಣಿಗೆ ಮಹಿಳೆಯರ ಕುಂಭ ಮೇಳದೊಂದಿಗೆ ಗ್ರಾಮದಲ್ಲಿ ನಡೆಯಿತು.

ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯರು, ಗುಳೇದಗುಡ್ಡದ ಅಭಿನವ ಕಾಡಸಿದ್ದೇಶ್ವರರು, ಇಟಗಿಯ ಗುರು ಶಾಂತವೀರ ಶಿವಾಚಾರ್ಯರು, ಪ್ರವಚನಕಾರ ಶಿವಕುಮಾರ ಶಾಸ್ತ್ರಿಗಳು, ಅರ್ಚಕ ಸಂಗಯ್ಯ ಹಿರೇಮಠ, ಗೌರಿಶಂಕರ ಮಠದ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-19-304151225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.