ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆಗೆ ಆಯ್ಕೆಯ ವಿಶ್ವಾಸ; ಗದ್ದಿಗೌಡರ

Published 20 ಮೇ 2024, 14:07 IST
Last Updated 20 ಮೇ 2024, 14:07 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರ ಪರಿಶ್ರಮದಿಂದಾಗಿ ಮತ್ತೆ ಲೋಕಸಭೆಗೆ ಆಯ್ಕೆಯಾಗಲಿದ್ದೇನೆ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ನಡೆದ ಲೋಕಸಭಾ ಚುನಾವಣೆ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದ ಫಲವಾಗಿ ಚುನಾವಣೆಯನ್ನು ಸುಸಜ್ಜಿತವಾಗಿ ಎದುರಿಸಲು ಸಾಧ್ಯವಾಯಿತು. ಕಳೆದ ಬಾರಿಗಿಂತಲೂ ಹೆಚ್ಚಿನ ಲೀಡ್ ಸಿಗಲಿದೆ ಎಂದರು.

ಶಾಸಕ ಸಿದ್ದು ಸವದಿ ಮಾತನಾಡಿ, ಚುನಾವಣೆಯಲ್ಲಿ ಕಾರ್ಯಕರ್ತರು ಬಹಳ ಪರಿಶ್ರಮ ಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಅವರ ಪಾತ್ರ ದೊಡ್ಡದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಲೋಕಸಭಾ ಚುನಾವಣೆಯ ಮತ ಎಣಿಕೆಯ ಏಜೆಂಟರ ನೇಮಕ ಮಾಡಿ, ಅವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಲಾಗುವುದು ಎಂದು ಹೇಳಿದರು.

ವಿವಿಧ ಮಂಡಲಗಳ ಅಧ್ಯಕ್ಷರು ಮಾತನಾಡಿ, ತಮ್ಮ ಮಂಡಲಕ್ಕೆ ಯಾವ ಮುಖಂಡರು ಬಂದಿದ್ದರು, ಮನೆ, ಮನೆಗೆ ಭೇಟಿ ನೀಡಿ ಮತ ಯಾಚಿಸಿದ ಕುರಿತು, ಎಷ್ಟು ಲೀಡ್‌ ತಮ್ಮ ಮಂಡಲದಿಂದ ದೊರೆಯಬಹುದು ಎಂಬುದನ್ನು ವಿವರಿಸಿದರು.

ಲೋಕಸಭಾ ಚುನಾವಣೆಯ ಪ್ರಭಾರಿ ಲಿಂಗರಾಜ ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್‌. ಪೂಜಾರ, ಹಣಮಂತ ನಿರಾಣಿ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಎಂ.ಕೆ. ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಯ್ಯ ಮುಗನೂರ, ರಾಜು ನಾಯ್ಕರ, ವಕ್ತಾರ ಶಿವಾನಂದ ಸುರಪುರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT