ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲ ವೃತ್ತಿ ಮಾಡಿ ಜನಪ್ರತಿನಿಧಿಯಾಗಿರುವೆ: ಗದ್ದಿಗೌಡರ

Published 19 ಏಪ್ರಿಲ್ 2024, 16:22 IST
Last Updated 19 ಏಪ್ರಿಲ್ 2024, 16:22 IST
ಅಕ್ಷರ ಗಾತ್ರ

ಬಾಗಲಕೋಟೆ: ‘ವಕೀಲ ವೃತ್ತಿ ಮಾಡಿ ಸಮಾಜ ಸೇವೆ ಸಲ್ಲಿಸಲು ರಾಜಕೀಯಕ್ಕೆ ಬಂದಿರುವೆ’ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹೇಳಿದರು.

ಶುಕ್ರವಾರ ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಬಾಗಲಕೋಟೆ ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದರು.

‘ಕೆಲವು ವರ್ಷ ವಕೀಲ ವೃತ್ತಿ ಮಾಡಿರುವೆ. ಪ್ರಾಮಾಣಿಕ ಸೇವೆ ಸಲ್ಲಿಸಲೆಂದು ರಾಜಕೀಯಕ್ಕೆ ಬಂದಿರುವೆ. ನಮ್ಮ ಕುಟುಂಬದಲ್ಲಿ ನನ್ನನ್ನು ಹೊರತುಪಡಿಸಿ ಬೇರೆಯವರು ಗ್ರಾಮ ಪಂಚಾಯಿತಿ ಸದಸ್ಯ ಕೂಡ ಆಗಿಲ್ಲ. ಜಿಲ್ಲಾ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷನಾಗಿ ಬಾಗಲಕೋಟೆಯನ್ನು ಜಿಲ್ಲೆಯಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿರುವೆ’ ಎಂದರು.

‘ಪ್ರಧಾನಿ ಮೋದಿಯಿಂದಾಗಿ ದೇಶದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕವಾಗಿ ಸಾಕಷ್ಟು ಮುನ್ನಡೆ ಸಾಧಿಸಿದೆ. ಪ್ರಧಾನಿ ಮೋದಿ ಕೈ ಬಲಪಡಿಸೋಣ’ ಎಂದು ಹೇಳಿದರು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ. ಪೂಜಾರ, ಕಾರ್ಯದರ್ಶಿ ಎಸ್.ಎ. ಹಾವರಗಿ, ಜಿ.ಎನ್. ಪಾಟೀಲ, ಸಿ.ವಿ. ಕೋಟಿ, ಶಿವಾನಂದ ಟವಳಿ , ಎಸ್.ಎಸ್. ಹಿರೇಮಠ, ಎಂ.ಎಂ. ಹಂಡಿ, ಜೆ.ಬಿ. ಬೂದಿಹಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT