ಬುಧವಾರ, ಆಗಸ್ಟ್ 4, 2021
23 °C

ಬಾಗಲಕೋಟೆ: ಕೋವಿಡ್-19ಗೆ 47 ವರ್ಷದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ತಾಲ್ಲೂಕಿನ ವೀರಾಪುರ ಗ್ರಾಮದ 47 ವರ್ಷದ ವ್ಯಕ್ತಿ ಶುಕ್ರವಾರ ತಡರಾತ್ರಿ ಕೋವಿಡ್-19 ಗೆ ಸಾವಿಗೀಡಾಗಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಮೂಲತಃ ಬಾಗಲಕೋಟೆ ಸಮೀಪದ ಸಿಕ್ಕೇರಿ ಗ್ರಾಮದವರಾದ ವ್ಯಕ್ತಿ ಕುಟುಂಬದೊಂದಿಗೆ ವೀರಾಪುರದಲ್ಲಿ ನೆಲೆಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಶುಕ್ರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಸಾವಿನ ನಂತರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, ವರದಿ ಪಾಸಿಟಿವ್ ಬಂದಿದೆ.

ಕೋವಿಡ್ ನಿಯಮಾವಳಿಯಂತೆ ನಸುಕಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ವೀರಾಪುರದಲ್ಲಿ ಆ ವ್ಯಕ್ತಿಯೊಂದಿಗೆ ಸಂಪಕ೯ದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು
ಬಾಗಲಕೋಟೆ ಡಿಎಚ್ಒ ಅನಂತ ದೇಸಾಯಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.