ಬಾಗಲಕೋಟೆ: ನವನಗರದ 200 ಎಕರೆ ಪ್ರದೇಶದಲ್ಲಿ ಮಾರುಕಟ್ಟೆ ಅಭಿವೃದ್ಧಿ ಪಡಿಸುವ ಕಾರ್ಯ ಆರಂಭಿಸಬೇಕು ಎಂದು ಬಾಗಲಕೋಟೆ ವ್ಯಾಪಾರ ಮತ್ತು ಉದ್ಯಮಿಗಳ ಸಂಘದ ಸದಸ್ಯರು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ವ್ಯಾಪಾರ ಕಡಿಮೆಯಾಗಿದ್ದು, ಅದಕ್ಕೆ ಪುನಶ್ಚೇತನ ಕೊಡುವ ನಿಟ್ಟಿನಲ್ಲಿ ಸಮಗ್ರ ಮಾರುಕಟ್ಟೆ ನಿರ್ಮಿಸಬೇಕು ಎಂದು ಕೋರಿದರು.

ಬಾಗಲಕೋಟ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯ ದಲ್ಲಿ ನೀಡಿದ ವಾಗ್ದಾನದಂತೆ ಈ ಯೋಜನೆಯನ್ನು ಶೀಘ್ರದಲ್ಲಿ ಜಾರಿ ಗೊಳಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತನೇ ಎಂದು ಸಚಿವ ಪಾಟೀಲ, ನಿಯೋಗಕ್ಕೆ ಭರವಸೆ ನೀಡಿದರು.

ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಸಂಘದ ಅಧ್ಯಕ್ಷ ರವಿ ಕುಮಟಗಿ, ಉಪಾ ಧ್ಯಕ್ಷ ಶ್ರೀನಿವಾಸ ಬಳ್ಳಾರಿ, ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ನಾಗರಾಜ ಕುಪ್ಪಸ್ತ, ಸುನೀಲ ಕಲಬುರ್ಗಿ, ಜಂಟಿ ಕಾರ್ಯದರ್ಶಿ ಬಾಳಪ್ಪ ಉಳ್ಳಾಗಡ್ಡಿ, ಕಾರ್ಯದರ್ಶಿ ರಮೇಶ ಕಂದಕೂರ, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆಂಜನೇಯ, ಮಕ್ತುಮಸಾಬ್ ದೊಡ್ಡಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-19-210929773

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.