ಬಾಗಲಕೋಟೆ: ನಗರಸಭೆ ಅಧ್ಯಕ್ಷರಾಗಿ ಸವಿತಾ ಲೆಂಕನ್ನವರ, ಉಪಾಧ್ಯಕ್ಷರಾಗಿ ಶೋಭಾರಾವ್ ಅವಿರೋಧವಾಗಿ ಆಯ್ಕೆಯಾದರು.
35 ಸದಸ್ಯ ಬಲದ ನಗರಸಭೆಯಲ್ಲಿ 30 ಸದಸ್ಯರು ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಸದಸ್ಯರು ನಾಮಪತ್ರ ಸಲ್ಲಿಸಲಿಲ್ಲ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.