ಬಾಗಲಕೋಟೆ: ‘ಯೋಜನೆ ಅನುಷ್ಠಾನದಲ್ಲಿ ಕೆಲವೊಂದು ತೊಂದರೆಗಳು ಎದುರಾಗುವುದು ಸಹಜ. ಆದರೆ, ಅವುಗಳನ್ನು ಪರಿಹರಿಸಿಕೊಂಡು ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವವಾಗಿದೆ. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸದ್ದರಿಂದ ಯೋಜನೆಗಳ ಅನುಷ್ಠಾನ ಕುಂಠಿತವಾಗಿದೆ’ ಎಂದು ಸಂಸದ ಪಿ.ಸಿ. ಗದ್ದಿಗೌಡರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದಿರುವುದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿದರು.

ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಯೋಜನೆಗಳಿಗೆ ಬೇಕಾಗುವ ಭೂಮಿ ಭೂಸ್ವಾಧೀನ ಹಾಗೂ ಬಾಕಿ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸೂಚಿಸಿದರು.

ಯೋಜನೆ ಅನುಷ್ಠಾದಲ್ಲಿ ಏಕೆ ವಿಳಂಬ ಮಾಡಲಾಗುತ್ತಿದೆ. ನ್ಯಾಯಾಲಯದಲ್ಲಿ ಪ್ರಕರಣಗಳಿದ್ದಲ್ಲಿ ಅವು ಯಾವ ಹಂತದಲ್ಲಿವೆ? ಯೋಜನೆ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿರುವಲ್ಲಿ ನಿಮ್ಮ ಬೇಜವಾಬ್ದಾರಿತನ ಎದ್ದು ತೋರುತ್ತಿದೆ. ಇದರಿಂದ ಸರಿಯಾಗಿ ಕೆಲಸ ಆಗುತ್ತಿಲ್ಲ. ನಿಮ್ಮ ವರ್ತನೆ ಬದಲಾಯಿಸಿಕೊಳ್ಳಬೇಕು ಎಂದು ರೈಲ್ವೆ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಜು ನಾಯಕ ಅವರಿಗೆ ಸೂಚನೆ ನೀಡಲಾಯಿತು.

ರಬಕವಿ-ಬನಹಟ್ಟಿ ಭಾಗದಲ್ಲಿ 25 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣದ ಪ್ರಸ್ತಾವ ಕಳುಹಿಸಿಲ್ಲ. ಲೋಕಾಪೂರದಿಂದ ದಾದನಟ್ಟಿವರೆಗಿನ ರೈಲು ಮಾರ್ಗದಲ್ಲಿ ಕೆಲಸ ಆಗುತ್ತಿಲ್ಲ. ದಾದನಟ್ಟಿಯಿಂದ ಯಾದವಾಡ ಮಾರ್ಗದ ಬಗ್ಗೆ ಹಾರಿಕೆ ಉತ್ತರ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ವಾರದಲ್ಲಿ ಪ್ರಗತಿ ತೋರಿಸಲು ಸೂಚಿಸಿದರು.

ಗದ್ದನಕೇರಿಯಿಂದ ಶಿರೂರವರೆಗಿನ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ 2.7 ಕಿ.ಮೀ ರಸ್ತೆ ನಿರ್ಮಾಣ ಕಾಮಗಾರಿ ಮಾತ್ರ ಬಾಕಿ ಇರುತ್ತದೆ. ಇದು ಕೂಡಾ ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ ಪಟ್ಟದಕಲ್ಲದಿಂದ ಶಿರೂರವರೆಗಿನ ರಸ್ತೆ ನಿರ್ಮಾಣದಲ್ಲಿ ಅರಣ್ಯ ಇಲಾಖೆಯಿಂದ ವಿಳಂಬವಾಗಿದೆ. ಅಧಿಕಾರಿಗಳಿಗೆ ಜನರ ತೊಂದರೆ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವಿಕುಮಾರ ಎಂ, ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ದುರ್ಗಾದಾಸ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-46427125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.