ಬಾಗಲಕೋಟೆ: ಧಾರ್ಮಿಕ ದತ್ತಿ ಇಲಾಖೆಯ ‘ಸಿ’ ಗ್ರೇಡ್ ದೇವಸ್ಥಾನಗಳು ಸುಣ್ಣ, ಬಣ್ಣ, ಜೀರ್ಣೋದ್ಧಾರವಿಲ್ಲದೇ ಶಿಥಿಲಗೊಂಡಿವೆ. ಅದರಲ್ಲಿ 4,170 ದೇವಸ್ಥಾನಗಳು ಕಾಣೆಯಾಗಿವೆ. ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಬಜೆಟ್ನಲ್ಲಿ ಅನುದಾನ ನೀಡಬೇಕು ಎಂದು ಕರ್ನಾಟಕ ಮಂದಿರ ಮಹಾಸಂಘದ ರಾಜ್ಯ ಸಂಯೋಜಕ ಮೋಹನ ಗೌಡ ಆಗ್ರಹಿಸಿದರು.

ಬಾಗಲಕೋಟೆಯ ಅಥಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಮಂದಿರ ಮಹಾಸಂಘ ಭಾನುವಾರ ಆಯೋಜಿಸಿದ್ದ ಪ್ರಾಂತೀಯ ಮಂದಿರ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ವು ಸಾವಿರಾರು ಕೋಟಿ ರೂಪಾಯಿಗಳನ್ನು ವಕ್ಫ್ ಮಂಡಳಿ, ಹಜ್ ಭವನ ಮುಂತಾದವುಗಳಿಗೆ ನೀಡುತ್ತದೆ. ದೇವಸ್ಥಾನಗಳಿಗೂ ನೀಡಬೇಕು ಎಂದು ಒತ್ತಾಯಿಸಿದರು.

ನಾಲ್ಕು ಲಕ್ಷಕ್ಕಿಂತಲೂ ಹೆಚ್ಚು ಮಂದಿರಗಳು ಸರ್ಕಾರದ ನಿಯಂತ್ರಣದಡಿಯಲ್ಲಿವೆ. ಈ ದೇವಸ್ಥಾನಗಳ ದೇವನಿಧಿಯಲ್ಲಿ ಭ್ರಷ್ಟಾಚಾರವಾಗುತ್ತಿದೆ. ಕೇವಲ ಆರ್ಥಿಕ ಲೂಟಿ ಮಾಡಲು ಮಂದಿರಗಳನ್ನು ಉಪಯೋಗಿಸಲಾಗುತ್ತಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ದೂರಿದರು.

ದೇವಸ್ಥಾನಗಳ ಉತ್ತಮ ನಿರ್ವಹಣೆಗಾಗಿ ಎಲ್ಲ ದೇವಸ್ಥಾನಗಳನ್ನು ಭಕ್ತರಿಗೆ ಒಪ್ಪಿಸಬೇಕು ಎಂದು ಅಧಿವೇಶನದಲ್ಲಿ ನಿರ್ಣಯ ಅಂಗೀಕಾರ ಮಾಡಲಾಯಿತು.

ಚಿಕ್ಕಗಲಿಗಲಿ ಶ್ರದ್ಧಾನಂದ ಆಶ್ರಮದ ಜನಾರ್ದನ ಸ್ವಾಮೀಜಿ, ವೇದಬ್ರಹ್ಮ ದುಂಡಯ್ಯಸ್ವಾಮಿ ಹಿರೇಮಠ ಉದ್ಘಾಟಿಸಿ ಮಾತನಾಡಿ, ದೇವಸ್ಥಾನಗಳ ಮೂಲಕ ಧರ್ಮ ಪ್ರಸಾರ ಹೇಗೆ ಮಾಡಬೇಕು ಎಂದು ತಿಳಿಸಿದರು.

ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಭುಸ್ವಾಮಿ ಸರಗಣಾಚಾರಿ ಮಾತನಾಡಿ, ದೇವಸ್ಥಾನಗಳನ್ನು ಪ್ರವಾಸಿ ಕೇಂದ್ರಗಳನ್ನಾಗಿ ಮಾಡುತ್ತಿದ್ದಾರೆ. ಇದರಿಂದಾಗಿ ದೇವಸ್ಥಾನಗಳಿಗೆ ಭಕ್ತರಿಗಿಂತ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತದೆ. ಧಾರ್ಮಿಕ ದತ್ತಿ ಇಲಾಖೆಯವರು ದೇವಸ್ಥಾನಗಳ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಮೂರು ವರ್ಷಗಳಿಂದ ಅರ್ಚಕರಿಗೆ ತಸ್ತಿಕ ಹಣ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಲವ್ ಜಿಹಾದ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದಕ್ಕೆಲ್ಲ ಪ್ರಮುಖ ಕಾರಣ ಹಿಂದೂಗಳಿಗೆ ಧರ್ಮಶಿಕ್ಷಣದ ಅಭಾವ ಎದ್ದು ಕಾಣುತ್ತದೆ. ದೇವಸ್ಥಾನಗಳ ಮೂಲಕ ಹಿಂದೂ ಯುವತಿಯರಿಗೆ ಧರ್ಮ ಶಿಕ್ಷಣ ನೀಡಬೇಕು ಎಂದು ಹೇಳಿದರು.

ಬಲದೇವ ಸಣ್ಣಕ್ಕಿಯರು, ವಕ್ಫ್ ಮಂಡಳಿ ಮತ್ತು ದೇವಸ್ಥಾನ ನಿರ್ವಹಣೆಯ ದೃಷ್ಟಿಯಿಂದ ಕಾನೂನು ಮಾಹಿತಿ ನೀಡಿದರು. ದೇವಸ್ಥಾನಗಳ ರಕ್ಷಣೆ ಮತ್ತು ದೇವಸ್ಥಾನಗಳ ಮೂಲಕ ಧರ್ಮಪ್ರಸಾರ ಮಾಡಲು ಹೇಗೆ ಕೃತಿಗೆ ತರಬೇಕು ಎಂದು ಚರ್ಚೆ ಮಮಾಡಲಾಯಿತು.

ನಾರಾಯಣ ಯಾಜಿಯವರು, ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಲಹೆ ಮತ್ತು ಕಾನೂನಾತ್ಮಕ ಮಾರ್ಗದರ್ಶನ ಮಾಡಿದರು. ಬಾಗಲಕೋಟೆ, ಬೆಳಗಾವಿ, ವಿಜಯಪುರ ಕಲಬುರಗಿ ಜಿಲ್ಲೆಯಿಂದ 150ಕ್ಕೂ ಅಧಿಕ ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು, ಪ್ರತಿನಿಧಿಗಳು ಮತ್ತು ಮುಖ್ಯಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-19-518995687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.