ಬಾಗಲಕೋಟೆ: ಶಾಸಕ ವಿಜಯಾನಂದ ಕಾಶಪ್ಪನವರ ಕಾಂಗ್ರೆಸ್ ವಿದ್ಯಾರ್ಥಿ ಯುವ ಘಟಕದಿಂದ ವಿವಿಧ ಹಂತಗಳಲ್ಲಿ ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಿಂದುಳಿದ ವರ್ಗಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಮಹಾಂತೇಶ ಗದ್ದನಕೇರಿ ಮನವಿ ಮಾಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಬದ್ಧತೆ, ಸಾಮಾಜಿಕ ನ್ಯಾಯವನ್ನು ಅಳವಡಿಸಿಕೊಂಡು ಬಂದಿದ್ದಾರೆ. ಅವರ ತಂದೆ ಶಾಸಕ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದರೂ, ಪಕ್ಷ ಸಂಘಟನೆ ಮೂಲಕವೇ ಎರಡು ಬಾರಿ ಶಾಸಕರಾಗಿದ್ದಾರೆ ಎಂದರು.

ಮುಖಂಡ ಅಮರೇಶ ನಾಗೂರ ಮಾತನಾಡಿ, ಕಾಶಪ್ಪನವರಿಗೆ ನೀಡಿದ್ದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಉತ್ತಮ ಕಾರ್ಯ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.

ಮುಖಂಡ ಜಬ್ಬಾರ್ ಕಲಬುರ್ಗಿ ಮಾತನಾಡಿ, ಮುಸ್ಲಿಂ ಸಮುದಾಯದ ಮನಸ್ಸನ್ನೂ ಗೆದ್ದಿದ್ದಾರೆ. ಯಾರೊಬ್ಬರೂ ಸ್ಪಂದಿಸದ ಕಾಲದಲ್ಲಿ ಕಾಶಪ್ಪನವರ ನಮ್ಮೊಂದಿಗೆ ನಿಂತಿದ್ದಾರೆ ಎಂದರು.

ಮುಖಂಡರು ರಜಾಕ್ ತಟಗಾರ, ಶರಣಪ್ಪ ಆಮದಿಹಾಳ, ಮಲ್ಲಣ್ಣ ಯಲಿಗಾರ, ಮಹಾಂತೇಶ ಆವಾರಿ ಇದ್ದರು.

ಜೆ.ಟಿ.ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೀಳಗಿ:ಮುಂಬರುವ ಸಚಿವ ಸಂಪುಟದಲ್ಲಿ ಶಾಸಕ ಜೆ.ಟಿ.ಪಾಟೀಲ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ ಆಗ್ರಹಿಸಿದರು.

ಸಮಿತಿಯ ಮುಖಂಡರು ಶನಿವಾರ ಕಾಂಗ್ರೆಸ್ ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ದಲಿತ ಸಂಘರ್ಷ ಸಮಿತಿಯ ಬೆಳಗಾವಿ ಭಾಗದ ಸಂಚಾಲಕ ಮಹಾದೇವ ಹಾದಿಮನಿ ಮಾತನಾಡಿ ಜೆ.ಟಿ. ಪಾಟೀಲರಿಗೆ ಅನುಭವ, ಹಿರಿತನ, ಪಕ್ಷ ನಿಷ್ಠೆ,ಮೌಲ್ಯಗಳ ಆಧಾರದ ಮೇಲೆ ಮುಂಬರುವ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ನೀಡಬೇಕೆಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ತಾಲ್ಲೂಕು ಕೋಶಾಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿ ಬೀಳಗಿ ತಾಲ್ಲೂಕಿಗೆ ಇಲ್ಲಿಯವರೆಗೆ ನಮ್ಮ ಪಕ್ಷದ ವಿಧಾನಸಭೆಯ ಶಾಸಕರಾದವರಿಗೆ ಸಚಿವರಾಗುವ ಅವಕಾಶ ಸಿಕ್ಕಿಲ್ಲ ಅಲ್ಲದೆ ಜಿಲ್ಲೆಯ ಹಿರಿಯ ರಾಜಕಾರಣಿಯೂ ಆಗಿರುವ ಜೆ. ಟಿ.ಪಾಟೀಲರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಹೇಳಿದರು .

ಕಾಂಗ್ರೆಸ್ ಪಕ್ಷದ ಎಸ್.ಸಿ. ಘಟಕದ ತಾಲ್ಲೂಕು ಅಧ್ಯಕ್ಷ ಬಸವರಾಜ ಹಳ್ಳದಮಣಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸಿದ್ದುಸಾರಾವರಿ, ಮುಖಂಡರಾದ ನೇಮಿರಾಜ ದೇಸಾಯಿ, ರಸೂಲ್ ಮುಜಾವರ, ಉದಯ ರಜಪೂತ, ಹನಮಂತ ಸೂಳಿಕೇರಿ, ರೇಖಾ ಕಟ್ಟೆಪ್ಪನವರ, ಸದಾಶಿವ ಜೂಂಜುರಿ ಇದ್ದರು.

ಚಿಮ್ಮನಕಟ್ಟಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಬಾದಾಮಿ: ‘ನೂತನ ಸಚಿವ ಸಂಪುಟ ರಚನೆಯಲ್ಲಿ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಅವಕಾಶ ನೀಡಬೇಕು’ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ಎಐಸಿಸಿ ಅಧ್ಯಕ್ಷರಿಗೆ ಮತ್ತು ಕೇಂದ್ರದ ಹೈಕಮಾಂಡಗೆ ಆಗ್ರಹಿಸುವುದಾಗಿ ಹೇಳಿದರು.

‘ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಕ್ಷೇತ್ರದಲ್ಲಿ ಜನಪರ ಅಭಿವೃದ್ಧಿ ಕೆಲಸದಲ್ಲಿ ತೊಡಗಿದ್ದಾರೆ. 2028ರ ಚುನಾವಣೆಯಲ್ಲಿ ಪುನಃ ಪಕ್ಷವನ್ನು ಅಧಿಕಾರಕ್ಕೆ ತರಲು ಉತ್ತರ ಕರ್ನಾಟಕದ ಕುರುಬ ಸಮಾಜದವರಿಗೆ ಯುವಕರ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಬೇಕು. ಉತ್ತರ ಕರ್ನಾಟಕದ ಜೊತೆಗೆ ಐತಿಹಾಸಿಕ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಸಹಾಯವಾಗುವುದು’ ಎಂದು ತಿಳಿಸಿದರು.

2018ರ ಚುನಾವಣೆಯಲ್ಲಿ ಬಾದಾಮಿ ಮತಕ್ಷೇತ್ರವು ಸಿದ್ದರಾಮಯ್ಯಗೆ ಪುನರ್ಜನ್ಮ ನೀಡಿದೆ. ಯುವ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ನೂತನ ಸಚಿವ ಸಂಪುಟ ರಚನೆಯಲ್ಲಿ ಸಚಿವ ಸ್ಥಾನ ಕೊಡಬೇಕು ಎಂದು ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯ ಬಸವರಾಜ ಪಾತ್ರೋಟ ಒತ್ತಾಯಿಸಿದ್ದಾರೆ.

ನೂತನ ಸಚಿವ ಸಂಪುಟದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ತಾಲ್ಲೂಕಿನ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಬ್ಬಾರ ಖಾಜಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-19-1787688680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.