ಬಾಗಲಕೋಟೆ: ಅನಾನುಕೂಲಕರ ಹವಾಮಾನದಿಂದ ಉಂಟಾಗುವ ಬೆಳೆ ನಷ್ಟದಿಂದ ರೈತರನ್ನು ರಕ್ಷಿಸುವ ಉದ್ದೇಶದಿಂದ ಜಾರಿಗೆ ತರಲಾದ ಹವಾಮಾನ ಆಧರಿತ ವಿಮೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ವಿಮೆ ಯೋಜನೆ ಕುರಿತು ಜರುಗಿದ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹವಾಮಾನ ಆಧಾರಿತ ವಿಮೆ ಯೋಜನೆಯ ಮರು ವಿನ್ಯಾಸದ ಪ್ರಮುಖ ಅಂಶಗಳನ್ನು ವಿವರವಾಗಿ ಚರ್ಚಿಸಿದರು.

ಮಳೆ, ತಾಪಮಾನ ಮತ್ತು ತೇವಾಂಶದಂತಹ ಪ್ರತಿಕೂಲ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ತೋಟಗಾರಿಕೆ ಮತ್ತು ವಾಣಿಜ್ಯ ಬೆಳೆಗಳಾದ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಯೋಜನೆಯಾಗಿದೆ ಎಂದು ತಿಳಿಸಿದರು.

ಮುಖ್ಯವಾಗಿ ಬೆಳೆ ಕಟಾವು ಪರಿಶೀಲನೆಗೆ ಬದಲಾಗಿ ಹವಾಮಾನ ಕೇಂದ್ರಗಳ ದತ್ತಾಂಶಗಳ ಆಧರಿಸಿ ಪರಿಹಾರ ನೀಡಲಾಗುತ್ತದೆ. ಅಲ್ಲದೇ ಬೆಳೆ ಬೆಳವಣಿಗೆಯ ಹಂತಗಳನ್ನು ಗಮನಿಸಿ ವಿಮಾ ಮೊತ್ತ ನಿಗದಿಪಡಿಸಲಾಗುತ್ತದೆ. ಹವಾಮಾನ ಸೂಚ್ಯಂಕಗಳ ಆಧಾರದ ಮೇಲೆ ಸ್ವಯಂ ಚಾಲಿತವಾಗಿ ಪರಿಹಾರ ಬಿಡುಗಡೆ ಮಾಡಲಾಗುತ್ತದೆ, ಬೆಳೆ ಹಾನಿಯ ಸಂದರ್ಭದಲ್ಲಿ ನೇರ ವಿಮಾ ಪಾವತಿಯನ್ನು ಬೆಳೆ ಸಾಲ ಪಡೆದ ಮತ್ತು ಸಾಲ ಪಡೆಯದ ರೈತರಿಗೆ ಒದಗಿಸಲಾಗುತ್ತದೆ. ಈ ಯೋಜನೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜೊತೆ ಜಾರಿಯಲ್ಲಿರುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಹವಾಮಾನ ವೈಪರೀತ್ಯಗಳಿಂದ ರೈತರಿಗೆ ಆಗುವ ನಷ್ಟ ತಗ್ಗಿಸಲು ಈ ಯೋಜನೆ ಸಹಾಯಕವಾಗಿದ್ದು, ಇದರ ಬಗ್ಗೆ ರೈತರಲ್ಲಿ ಹೆಚ್ಚಿನ ತಿಳಿವಳಿಕೆ ನೀಡುವ ಕೆಲಸ ಆಗಬೇಕು ಎಂದು ತಿಳಿಸಿದರು.

ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯೋಜನೆಯ ಲಾಭ ರೈತರಿಗೆ ಮುಟ್ಟಿಸುವ ಕೆಲಸ ಆಗಬೇಕು. ರೈತರು ಈ ಯೋಜನೆಯ ಬಗ್ಗೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಲೀಡ್ ಬ್ಯಾಂಕ್ನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಗೌರಮ್ಮ ಸುಂಕದ ತೋಟಗಾರಿಕೆ ವಿವಿಯ ಸಂಶೋಧನಾ ನಿರ್ದೇಶಕರು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು, ಎಲ್ಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ವಿಮಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-19-1696171752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.