ಬಾಗಲಕೋಟೆ: ‘ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿಯ ರೈತ ಮೋರ್ಚಾದಿಂದ ನ.27 ರಂದು ಜಿಲ್ಲಾಡಳಿತ ಭವನದ ಎದುರು ಪ್ರತಿಭಟಿಸಲಾಗುತ್ತದೆ’ ಎಂದು ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಗಡಿಯನ್ನವರ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಭವನದ ಎದುರು ಬೆಳಿಗ್ಗೆ 11ಕ್ಕೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಜನಪ್ರತಿನಿಧಿಗಳು, ಮಾಜಿ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ ಎನ್ಡಿಆರ್ಎಫ್, ಎಸ್ಡಿಆರ್ಎಫ್ ನಿಯಮ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಪರಿಹಾರ ವಿತರಿಸಬೇಕು. ಮೆಕ್ಕೆ ಜೋಳದ ದರ ಕುಸಿದಿದ್ದು, ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಕೇಂದ್ರ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ಕೇಂದ್ರಗಳನ್ನು ಆರಂಭಿಸಿಲ್ಲ. ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಕೇವಲ ಶಾಸಕರ ಖರೀದಿ ಕೇಂದ್ರ ಆರಂಭಗೊಂಡಿವೆ’ ಎಂದು ವ್ಯಂಗ್ಯವಾಡಿದರು.

‘ಯುಕೆಪಿ, ಕಳಸಾ–ಬಂಡೂರಿ ಸೇರಿದಂತೆ ನೀರಾವರಿ ಯೋಜನೆಗಳಿಗೆ ವರ್ಷಕ್ಕೆ ₹80 ಸಾವಿರ ಕೋಟಿ ಮೀಸಲಿಡಬೇಕು. ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರೋತ್ಸಾಹ ಧನ ವಿತರಿಸಬೇಕು. ಉಚಿತ ವಿದ್ಯುತ್ ಸಂಪರ್ಕ ಯೋಜನೆ ಮುಂದುವರಿಸಬೇಕು’ ಎಂದಯ ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಕಾರ್ಯದರ್ಶಿ ಶಶಿಕುಮಾರ್ ಗತ್ತಣ್ಣವರ, ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಶಿವಾನಂದ ಸುರಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.