ಬಾಗಲಕೋಟೆ: ‘ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಸಂಚಾರ ಮಾಡುವುದರ ಜೊತೆಗೆ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಸ್ಯೆ ಇರುವ ಮಾರ್ಗಗಳ ಪರಿಶೀಲಿಸಿ ತಕ್ಷಣ ಪರಿಹಾರ ಕಲ್ಪಿಸಬೇಕು’ ಎಂದು ಶಾಸಕ ಜೆ.ಟಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನವನಗರದ ಎನ್ಡಬ್ಲು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬೀಳಗಿ ವಿಧಾನಸಭಾ ಕ್ಷೇತ್ರದ ಪ್ರಯಾಣಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ ಸೌಲಭ್ಯಗಳ ಕೊರತೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಬಸ್ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಸಾರ್ವಜನಿಕರಿಂದ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಸ್ಯೆ ಇರುವ ಮಾರ್ಗಗಳ ಪರಿಶೀಲನೆ ನಡೆಸಿ, ಬಸ್ ನಿಲುಗಡೆ ಸೇರಿದಂತೆ ನಾಮಫಲಕ ಅಳವಡಿಕೆಗೆ ತಕ್ಷಣ ಕ್ರಮಕೈಗೊಳ್ಳಬೇಕು. ಈಗಾಗಲೇ ಕಗಲಗೊಂಬ, ಹೂಲಗೇರಿ, ಕೆರೂರ ಮಾರ್ಗಗಳಲ್ಲಿ ಎರಡು ಬಾರಿ, ಸೀಮಿಕೇರಿ ಬೈಪಾಸ್ ಕ್ರಾಸ್ನಲ್ಲಿ ನಿಲುಗಡೆ, ಹಳೆ ಅನಗವಾಡಿ ಕ್ರಾಸ್, ದೇವನಾಳ ಪುನರ್ವಸತಿ ಕೇಂದ್ರ, ಗುಳಬಾಳ ಪು.ಕೇ ಶಾಲೆಗೆ ಬಸ್ ನಿಲುಗಡೆ, ಅಮಲಝರಿ ಗ್ರಾಮದಲ್ಲಿರುವ ಇಂದಿರಾ ಪ್ಲಾಟ್ ಬೋರ್ಡ್ ಹಾಗೂ ಬಾಗಲಕೋಟೆ-ಅರಕೇರಿ ತಾಂಡಾ ವಸ್ತಿ ಸಾರಿಗೆ ಪುನಃ ಪ್ರಾರಂಭಿಸುವ ಕುರಿತು ತಿಳಿಸಲಾಗಿತ್ತು. ಜಾರಿಯಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

‘ಬೇರೆ ರಾಜ್ಯಗಳಿಗೆ ತೆರಳುವ ಕೆಲವೊಂದು ಬಸ್ಗಳನ್ನು ಸ್ಥಳೀಯವಾಗಿ ಸಂಚರಿಸಲು ಕ್ರಮಕೈಗೊಳ್ಳಬೇಕು. ಹೆಚ್ಚುವರಿ 10 ಬಸ್ಗಳನ್ನು ಬೀಳಗಿ ಘಟಕಕ್ಕೆ ನೀಡಿ. ಬೀಳಗಿಯಿಂದ ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಪ್ರತ್ಯೇಕ ಬಸ್ನ್ನು ಹೊಸದಾಗಿ ಪ್ರಾರಂಭಿಸಬೇಕು. ಬೀಳಗಿ, ಬಾಗಲಕೋಟೆ ಹಾಗೂ ಬಾದಾಮಿ ಡಿಪೋಗಳಲ್ಲಿನ ಪ್ರತಿ ಮಾರ್ಗದ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೇ ಬೇಜವಾಬ್ದಾರಿತನ ತೋರಿದ ಬೀಳಗಿ ಘಟಕ ವ್ಯವಸ್ಥಾಪಕ ಆರ್.ಸಿ.ಖೇಡರ ಅವರಿಗೆ ನೋಟಿಸ್ ಜಾರಿ ಮಾಡಿ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಟಿ. ಪಾಟೀಲ, ಜಿಲ್ಲಾ ಸಂಚಾರಿ ಅಧಿಕಾರಿ ಕೆ.ಕೆ. ಲಮಾಣಿ, ಘಟಕ ವ್ಯವಸ್ಥಾಪಕ ಕೃಷ್ಣಾ ಚವ್ಹಾಣ, ಎ.ಎ.ಕೋರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-19-1540453885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.