ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಚಟುವಟಿಕೆಗಳು ಬೆಂಗಳೂರು, ದೆಹಲಿಗೆ ಸ್ಥಳಾಂತರಗೊಂಡಿವೆ.

ಚುನಾವಣೆ ಘೋಷಣೆಯಾದರೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಪರಿಣಾಮ ಪಕ್ಷದೊಳಗೆ ಹಾಗೂ ಸಾರ್ವಜನಿಕರ ಮಧ್ಯೆ ಅಭ್ಯರ್ಥಿಯ ಆಯ್ಕೆ ಕುರಿತು ಬಿರುಸಿನ ಚರ್ಚೆಗಳು ನಡೆದಿವೆ. ದಿನಕ್ಕೊಂದು ಹೊಸ ಹೆಸರುಗಳು ಕೇಳಿ ಬರುತ್ತಿವೆ.

ಬಿಜೆಪಿ ಕೋರ್ ಕಮಿಟಿಯು ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್ ಕಳುಹಿಸಿದೆ. ಬಿಜೆಪಿ ಮೂಲಗಳ ಪ್ರಕಾರ ಕೆಲವರು ಇಬ್ಬರ ಹೆಸರು ಎಂದರೆ, ಇನ್ನೂ ಕೆಲವರು ಹಲವು ಹೆಸರುಗಳಿವೆ ಎನ್ನುತ್ತಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿರುವ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ತಮಗೇ ಟಿಕೆಟ್ ಸಿಗಲಿದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿಯೂ ಭಾಗವಹಿಸಿ ಬಂದಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿರುವ ಪಿ.ಎಚ್. ಪೂಜಾರ ಅವರೂ ಆಕಾಂಕ್ಷಿಯಾಗಿದ್ದು, ಅವರ ಹೆಸರೂ ಕೇಳಿ ಬರುತ್ತಿದೆ.

ಈ ನಡುವೆ ಹಿಂದುಳಿದ ವರ್ಗಕ್ಕೆ ಸೇರಿದ ವೀರಣ್ಣ ಹಳೇಗೌಡರ ಸಹ ಟಿಕೆಟ್ ಕೇಳುತ್ತಿದ್ದಾರೆ. ‘ಹಿಂದುಳಿದ ವರ್ಗಕ್ಕೆ ಸೇರಿದವನಾಗಿದ್ದೇನೆ. ಬಹಳಷ್ಟು ಹೋರಾಟ ಮಾಡಿದ್ದೇನೆ. ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತಿತರರನ್ನು ಭೇಟಿ ಮಾಡಿ ಅವಕಾಶ ಮಾಡಿಕೊಡುವಂತೆ ಕೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ಹಳೇಗೌಡರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.