ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಣ ಹಂಚುವುದು ಹಾಗೂ ದ್ವೇಷಭಾಷಣ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಚುನಾವಣೆ ಅನೂರ್ಜಿತಗೊಳಿಸಿ, ಮರು ಚುನಾವಣೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಗರಾಜ ಕಲಕುಟಕರ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಮತದಾನದ ದಿನ ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಅಭ್ಯರ್ಥಿ ಪರವಾಗಿ ಮತ ಪಡೆಯಲು ಮತದಾರರಿಗೆ ಹಣದ ಆಮಿಷವೊಡ್ಡಿದ್ದಾರೆ. ಅದರಂತೆಯೇ ಇನ್ನೊಂದೆಡೆ ಬಿಜೆಪಿ ಮುಖಂಡರು ದ್ವೇಷಭಾಷಣ ಮಾಡಿದ್ದಾರೆ. ಈ ಎರಡೂ ಘಟನೆಗಳ ಕುರಿತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಬಗ್ಗೆ ದೂರು ದಾಖಲಾಗಿವೆ ಎಂದು ತಿಳಿಸಿದರು.

ಚುನಾವಣೆಗೆ ಸ್ಪರ್ಧಿಸಿದಾಗಲೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವಂತಿಲ್ಲ. ಮತದಾರರಿಗೆ ಆಮಿಷವೊಡ್ಡುವುದು, ದ್ವೇಷಭಾಷಣ ಮಾಡಬಾರದು ಎಂದು ತಿಳಿಸಲಾಗುತ್ತದೆ. ಉಲ್ಲಂಘಿಸಿದರೆ, ಚುನಾವಣೆಯನ್ನು ರದ್ದುಪಡಿಸಬಹುದು ಎಂದಿದೆ. ಆದ್ದರಿಂದ ಚುನಾವಣೆ ರದ್ದುಗೊಳಿಸಬೇಕು. ಮರು ಚುನಾವಣೆಗೆ ಮಾಡಬೇಕು ಎಂದು ಒತ್ತಾಯಿಸಿದರು.

ಮತದಾನ ಎಣಿಕೆ ಮುನ್ನವೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕು. ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಕೆಆರ್ಎಸ್ ಪಕ್ಷವೂ ಈ ಕುರಿತು ಕಾನೂನು ಹೋರಾಟ ನಡೆಸಲು ಉದ್ದೇಶಿಸಿದೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-19-988861871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.