ರಾಂಪುರ: ಉಪ ಚುನಾವಣೆಯಲ್ಲಿ ಬಾಗಲಕೋಟೆ ನಗರ ಅಷ್ಟೇ ಅಲ್ಲದೇ ಗ್ರಾಮೀಣ ಭಾಗದಲ್ಲೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಲೀಡ್ ಸಿಗುತ್ತದೆ. ಹೀಗಾಗಿ ಅವರ ಗೆಲುವು ಖಚಿತ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಬೆನಕಟ್ಟಿ, ಕಿರಸೂರ, ಬೆಣ್ಣೂರ ಗ್ರಾಮಗಳಲ್ಲಿ ವೀರಣ್ಣ ಚರಂತಿಮಠ ಪರವಾಗಿ ಮತಯಾಚನೆ ಮಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ಗೆ ಲೀಡ್ ಸಿಗುತ್ತಿತ್ತು. ಬಾಗಲಕೋಟೆ ನಗರದಲ್ಲಿ ಬಿಜೆಪಿಗೆ ಲೀಡ್ ಬರುತ್ತಿತ್ತು. ಆದರೆ, ಈ ಬಾರಿ ಕಾರ್ಯಕರ್ತರ ಉತ್ಸಾಹ ನೋಡಿದರೆ ಗ್ರಾಮೀಣ ಭಾಗದಲ್ಲೂ ಬಿಜೆಪಿ ಲೀಡ್ ಪಡೆಯುತ್ತದೆ ಎಂಬ ವಿಶ್ವಾಸ ಮೂಡುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಮತದಾರರು ಬೇಸತ್ತಿದ್ದಾರೆ. ಮೂರು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ನಾವು ಹಿಂದೂಗಳಲ್ಲವೇ ಎನ್ನುತ್ತ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಮುಸ್ಲಿಂರಿಗೆ ಹೆಚ್ಚು ಹಣ ನೀಡುತ್ತ ಜನರಿಗೆ ಮೋಸ ಮಾಡಿದ್ದಾರೆ ಎಂದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ಸಿಗೆ ಸೋಲಾಗುತ್ತದೆ ಎಂಬ ಭಯ ಕಾಡುತ್ತಿದ್ದು, ಶತಾಯ ಗತಾಯ ಗೆಲ್ಲಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದಾರೆ. ಹಿಂದೆ ಯಾವುದೇ ಮುಖ್ಯಮಂತ್ರಿಗಳು ಉಪಚುನಾವಣೆಯಲ್ಲಿ ಈ ರೀತಿ ಪ್ರಚಾರಕ್ಕೆ ಇಳಿದಿರಲಿಲ್ಲ ಎಂದರು.

ಶಾಸಕ ಸಿದ್ದು ಸವದಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. ಮುಖಂಡರಾದ ಮೋಹನ ಜಾಧವ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-19-134276850

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.