ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಅಂತಿಮಗೊಳಿಸಲು ಮಂಗಳವಾರ ಬೆಂಗಳೂರಿನ ವಿಧಾನಸೌಧದ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಅಭ್ಯರ್ಥಿ ಆಯ್ಕೆ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ವಹಿಸಿದೆ.

‘ಎಚ್.ವೈ.ಮೇಟಿ ಅವರ ಇಬ್ಬರು ಪುತ್ರರಾದ ಮಲ್ಲಿಕಾರ್ಜುನ ಹಾಗೂ ಉಮೇಶ ಅವರ ಹೆಸರು ಶಿಫಾರಸು ಮಾಡಿ, ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಇಬ್ಬರಲ್ಲಿ ಯಾರನ್ನೇ ಅಭ್ಯರ್ಥಿ ಎಂದು ಪಕ್ಷ ತೀರ್ಮಾನಿಸಿದರೂ ಅವರ ಗೆಲುವಿಗೆ ಎಲ್ಲರೂ ಸೇರಿ ಶ್ರಮಿಸುತ್ತೇವೆ. ಉಪಚುನಾವಣೆ ಪ್ರಚಾರಕ್ಕೆ ಬಾಗಲಕೋಟೆ ಕ್ಷೇತ್ರಕ್ಕೆ ಎರಡು ದಿನಗಳಂತೆ ಎರಡು ಸಲ ಬರಬೇಕು’ ಎಂದು ಸಮಿತಿ ಸದಸ್ಯರು ಮುಖ್ಯಮಂತ್ರಿ ಅವರನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿ ಎಂಬಂತೆ ಬಿಂಬಿತಗೊಂಡಿರುವ ಮಹಾದೇವಿ ಮೇಟಿ ಅವರ ಬಗ್ಗೆ ಚರ್ಚೆ ಆಗಲಿಲ್ಲ ಎಂದು ತಿಳಿದು ಬಂದಿದೆ. ಸಚಿವರಾದ ಆರ್.ಬಿ.ತಿಮ್ಮಾಪುರ, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಶಿವರಾಜ ತಂಗಡಗಿ, ಭೈರತಿ ಸುರೇಶ್, ಶಾಸಕ ಸಿ.ಎಸ್.ನಾಡಗೌಡ, ಸಮಿತಿ ಸಂಚಾಲಕ ವಸಂತಕುಮಾರ, ಪರಿಷತ್ ಸದಸ್ಯ ಎಫ್.ಎಚ್.ಜಕ್ಕಪ್ಪನವರ, ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.