ಬಾಗಲಕೋಟೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು, ಬಾಗಲಕೋಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೂ ಇಕ್ಕಟ್ಟು ತಂದಿಟ್ಟಿದೆ.

ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದವರಿಗೆ ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ನೀಡಿದಲ್ಲಿ, ಬಾಗಲಕೋಟೆಯಲ್ಲಿ ಮೇಟಿ ಅವರ ಕುಟುಂಬಕ್ಕೂ ಅದೇ ನಿಯಮ ಅನ್ವಯವಾಗಬೇಕು ಸಚಿವ ಈಶ್ವರ ಖಂಡ್ರೆ ಸೇರಿ ಹಲವರು ಹೈಕಮಾಂಡ್ಗೆ ಹೇಳಿರುವುದು ಕ್ಷೇತ್ರದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

‘ಎಚ್.ವೈ.ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡದಿದ್ದರೆ, ನಮಗೇ ನೀಡಬೇಕು’ ಎಂದು ಈ ಹಿಂದೆ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ವೀಣಾ ಕಾಶಪ್ಪನವರ ಮತ್ತು ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿದ್ದ ರಕ್ಷಿತಾ ಈಟಿ ಹೇಳಿಕೆ ನೀಡಿದ್ದಾರೆ.

ಈವರೆಗೆ ‘ಮೇಟಿ ಕುಟುಂಬಕ್ಕೆ ಟಿಕೆಟ್’ ಎನ್ನುತ್ತಿದ್ದವರು ಮರೆಯಲ್ಲಿ ಯತ್ನ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ ಮೇಟಿ, ಉಮೇಶ ಮೇಟಿ, ಪುತ್ರಿಯರಾದ ಬಾಯಕ್ಕ ಮೇಟಿ ಮತ್ತು ಮಹಾದೇವಿ ಮೇಟಿ ಅವರನ್ನು ಕರೆದು ಮಾತುಕತೆ ನಡೆಸಿದ್ದರು. ‘ಟಿಕೆಟ್ ಯಾರಿಗೇ ನೀಡಲಿ, ಒಗ್ಗಟ್ಟಾಗಿ ಹೋಗಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನಂತರವೂ ಕುಟುಂಬದೊಳಗಿನ ತಿಕ್ಕಾಟ ನಿಂತಿಲ್ಲ.

‘ನನಗೇ ಟಿಕೆಟ್ ನೀಡಬೇಕು. ನನಗೆ ನೀಡದಿದ್ದರೆ, ಸಹೋದರ ಉಮೇಶಗೆ ನೀಡಬೇಕು. ನನಗೆ ಅಪಾರ ಅಭಿಮಾನಿಗಳು ಇದ್ದಾರೆ. ಅವರನ್ನು ಕೇಳಿ ಸ್ಪರ್ಧೆಯಿಂದ ಹಿಂದೆ ಸರಿಯ ಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಅವರಿಗೇ ಹೇಳುವ ಮೂಲಕ ಮಹಾದೇವಿ ಮೇಟಿ ಟಿಕೆಟ್ ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದಾರೆ.

ಉಮೇಶ ಮೇಟಿ ಅವರು ಶುಕ್ರವಾರ ಸಂಜೆ ಕಾಂಗ್ರೆಸ್ನ ಕೆಲ ಮುಖಂಡರ ಸಭೆ ಕರೆದು, ಚರ್ಚಿಸಿದ್ದಾರೆ. ಚುನಾವಣೆ ಗೆಲುವಿಗೆ ರೂಪಿಸಬೇಕಾದ ರಣತಂತ್ರಗಳ ಕುರಿತು ಸಮಾಲೋಚಿಸಿದ್ದಾರೆ. ಈ ಸಭೆಯಲ್ಲಿ ಮಲ್ಲಿಕಾರ್ಜುನ ಮೇಟಿ ಭಾಗವಹಿಸಿರಲಿಲ್ಲ. ಶನಿವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಕರೆದ ಸಭೆಗೆ ಮಹಾದೇವಿ ಮೇಟಿ ಗೈರು ಹಾಜರಾಗಿದ್ದರು.

ಎಚ್.ವೈ.ಮೇಟಿ ಕುಟುಂಬದವರೇ ಪೈಪೋಟಿಗೆ ಬಿದ್ದು ಟಿಕೆಟ್ ಕೇಳುತ್ತಿರುವುದು ಮುಖಂಡರು ಹಾಗೂ ಕಾರ್ಯಕರ್ತರನ್ನು ಗೊಂದಲಕ್ಕೆ ದೂಡಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ.

ಬಿಜೆಪಿ ಅಭ್ಯರ್ಥಿಯು ಈಗಾಗಲೇ ನಾಮಪತ್ರವನ್ನು ಸಲ್ಲಿಸಿದ್ದು ಪ್ರಚಾರವನ್ನು ಆರಂಭಿಸಿದ್ದಾರೆ. ಟಿಕೆಟ್ ಘೋಷಣೆ ಆಗದ ಕಾರಣ ಮೇಟಿ ಪುತ್ರರಲ್ಲಿ ಯಾರನ್ನು ಭೇಟಿಯಾಗಬೇಕು ಎಂಬ ಗೊಂದಲ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಹಲವರಿಗೆ ಕಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.