ಬಾಗಲಕೋಟೆ: ‘ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರದಲ್ಲಿ ಏ.23 ಮತ್ತು 24 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬಾಗಲಕೋಟೆ ನಗರದ 13 ಕೇಂದ್ರಗಳಲ್ಲಿ 5,553 ವಿದ್ಯಾರ್ಥಿಗಳು ಹಾಗೂ ಜಮಖಂಡಿ ನಗರದ 8 ಕೇಂದ್ರಗಳಲ್ಲಿ 4,247 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದರು.

ಸಿಇಟಿ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್, ಫೇಸ್ ರೆಕಗ್ನಿಶನ್ ಅಳವಡಿಸಲಾಗಿದೆ. ಪರೀಕ್ಷೆ ಮುನ್ನಾದಿನ ಪ್ರಾತ್ಯಕ್ಷಿಕೆಯ ಮೂಲಕ ಖಚಿತ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರಿಗೆ ಸೂಚನೆ ನೀಡಿದರು.

‘ಪರೀಕ್ಷೆಗೆ ವಿಜ್ಞಾನ ವಿಭಾಗದ ಉಪನ್ಯಾಸಕರನ್ನು ಹೊರತುಪಡಿಸಿ ಬೇರೆ ವಿಷಯಗಳ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಗುರುತಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು’ ಎಂದು ಹೇಳಿದರು.

‘ಪರೀಕ್ಷೆಯಲ್ಲಿ ಉಪ ಮುಖ್ಯ ಅಧೀಕ್ಷಕರ ಪಾತ್ರ ಹಾಗೂ ಜವಾಬ್ದಾರಿ ಮುಖ್ಯವಾಗಿದೆ. ಪ್ರತಿ 24 ವಿದ್ಯಾರ್ಥಿಗಳಿಗೆ ಒಬ್ಬ ಕೊಠಡಿ ಮೇಲ್ವಿಚಾರಕರಂತೆ ನೇಮಿಸಿಕೊಳ್ಳಬೇಕು. ಇದರ ಜೊತೆಗೆ ಅಗತ್ಯವಿರುವ ಇತರೆ ಸಿಬ್ಬಂದಿ ಸಹ ನೇಮಿಸಿಕೊಂಡು ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರ ಅಳವಡಿಸಬೇಕು’ ಎಂದು ಸೂಚಿಸಿದರು.

‘ಪರೀಕ್ಷೆಗಳು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಯಲಿದ್ದು, ಎರಡು ಅವಧಿಗೆ ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಅಧಿಕಾರಿ ಹಾಗೂ ಸಿಬ್ಬಂದಿ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರೆ ಅಂತಹವರ ಮಕ್ಕಳನ್ನು ಪರೀಕ್ಷೆಗೆ ನಿಯೋಜನೆ ಮಾಡುವಂತಿಲ್ಲ’ ಎಂದು ತಿಳಿಸಿದರು.

‘ಪರೀಕ್ಷಾ ಕೊಠಡಿಗೆ ಪಠ್ಯ ಸಾಮಗ್ರಿ, ಜಾಮಿಟ್ರಿ ಬಾಕ್ಸ್, ಕ್ಯಾಲ್ಕುಲೇಟರ್, ಮೊಬೈಲ್ ಫೋನ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳು, ಕೈಗಡಿಯಾರ, ಬಳೆ, ಯಾವುದೇ ಆಭರಣ, ಲೋಹದ ವಸ್ತುಗಳು (ಮಂಗಳ ಸೂತ್ರ ಹೊರತುಪಡಿಸಿ), ಕ್ಯಾಮೆರಾ, ಬ್ಲೂಟೂತ್ ಸಾಧನ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರದ ಜೊತೆಗೆ ಯಾವುದಾದರೊಂದು ಗುರುತಿನ ಚೀಟಿ ತರಬೇಕು’ ಎಂದರು.

ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಜಮಖಂಡಿ ತಹಶೀಲ್ದಾರ್ ಅನೀಲ ಬಡಿಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-19-365929223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.