ಬಾಗಲಕೋಟೆ: ‘ಬಾಲ್ಯ ವಿವಾಹಕ್ಕೆ ಕಾರಣರಾಗುವ ಎಲ್ಲರ ವಿರುದ್ಧವೂ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ವೀಣಾ ಪಟ್ಟಣಶೆಟ್ಟಿ ಹೇಳಿದರು.

ಬಿವಿವಿ ಸಂಘದ ಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರೀಚ್ ಸಂಸ್ಥೆ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಜಗನ್ನಾಥ ಚವ್ಹಾಣ ಮಾತನಾಡಿ, ಬಾಲ್ಯ ವಿವಾಹದಿಂದಾಗುವ ಅನಾನುಕೂಲಗಳು ಹಾಗೂ ಬಾಲ್ಯವಿವಾಹ ತಡೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.

ರೀಚ್ ಸಂಸ್ಥೆ ನಿರ್ದೇಶಕ ಜಿ.ಎನ್ ಸಿಂಹ ಮಾತನಾಡಿ, ‘ಬಾಲ್ಯ ವಿವಾಹವು ಘೋರ ಅಪರಾಧವಾಗಿದೆ. ಅಕ್ಷಯ ತೃತೀಯದಂತಹ ಶುಭ ಸಂದರ್ಭದ ನೆಪದಲ್ಲಿ ಅಥವಾ ಇನ್ನಾವುದೇ ಧಾರ್ಮಿಕ ಪರಂಪರೆಯಡಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಿದೆ’ ಎಂದರು.

ಸಂಯೋಜಕಿ ಜಿ.ಎಂ.ನಾವದಗಿ, ಸಿಬ್ಬಂದಿ ಕಾರ್ಯದರ್ಶಿ ಎಂ.ನಂಜುಂಡಸ್ವಾಮಿ,, ರೇಂಜರ್ ಘಟಕದ ಮುಖ್ಯಸ್ಥೆ ಐ.ಕೆ.ಮಠದ, ರೋವರ್ ಘಟಕದ ಮುಖ್ಯಸ್ಥ ಸುರೇಶ್ ಆಡಗಲ್ ಇದ್ದರು. ಬಾಲ್ಯ ವಿವಾಹ ವಿರೋಧಿಸುವ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-19-1825729665

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.