ಬಾಗಲಕೋಟೆ: ಜಿಲ್ಲೆಯಲ್ಲಿ ಏ.20 ರಂದು ಅಕ್ಷಯ ತೃತೀಯ ಹಿನ್ನಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಹಾಗೂ ವೈಯಕ್ತಿಕ ವಿವಾಹ ಕಾರ್ಯಕ್ರಮಗಳಲ್ಲಿ ಬಾಲ್ಯವಿವಾಹ ಮಾಡಿದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಫಲಕ ಪ್ರದರ್ಶಿಸಬೇಕು. ಬಾಲ್ಯ ವಿವಾಹ ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ, ಕಾನೂನು ಪ್ರಕಾರ ಸಮಾನಾಗಿ ಹೊಣೆಗಾರರಾಗುತ್ತಾರೆ.

ವಿವಾಹ ಸಮಾರಂಭ ನಡೆಸುವ ಪುರೋಹಿತರು, ಅದನ್ನು ಏರ್ಪಡಿಸುವ ಸಂಬಂಧಿಕರು, ಸುಗಮಗೊಳಿಸುವ ಆಯೋಜಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ.

ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ತುರ್ತು ಸೇವೆ 112, ಹತ್ತಿರದ ಪೊಲೀಸ್ ಠಾಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು.

ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿಡಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-1671983496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.