ಬಾಗಲಕೋಟೆ: ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಲಾಖೆಗಳು ಹೇಗೆ ಚುರುಕಾಗಿ ಕೆಲಸ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಹವಾಮಾನ ಬದಲಾವಣೆಯ ಪ್ರತಿಕೂಲ ಅಂಶಗಳನ್ನು ನಿವಾರಿಸಬೇಕು ಎಂದರು.

ಈ ಯೋಜನೆಯಡಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಲಾಗಿದೆ. ಈ ಸೂಚಕಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಪಾಲುದಾರ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅತ್ಯವಶ್ಯಕವಾಗಿದೆ ಎಂದರು.

ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಪವಿತ್ರಾ ನಾಯಕ್ ಮಾತನಾಡಿ, ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞ ಶಶಿಕುಮಾರ್ ಎನ್ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಎನ್ ಎನ್.ಆರ್.ಡಿ.ಎಂ.ಎಸ್ ಅಧಿಕಾರಿ ಚಂದ್ರಶೇಖರ ಉಪಸ್ಥಿತರಿದ್ದರು.

46 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ–ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-19-459615647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.