ಬಾಗಲಕೋಟೆ: ‘ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಮತಗಿ ಪಟ್ಟಣ ಪಂಚಾಯಿತಿಯ ಇಬ್ಬರು ಸದಸ್ಯರು, ಮುಖಂಡರೊಬ್ಬರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ವರದಿ ಬಂದಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ, ‘ಬಿಡಿಸಿಸಿ ಮಾಜಿ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದು, ಅವರನ್ನು ಉಚ್ಚಾಟಿಸುವಂತೆ ಬ್ಲಾಕ್ ಅಧ್ಯಕ್ಷರು ವರದಿ ನೀಡಿದ್ದಾರೆ’ ಎಂದು ತಿಳಿಸಿದರು.

‘ಮಾ.30ರಿಂದ ಏ.7ರವರೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ಬಾಗಲಕೋಟೆ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ದಾವಣಗೆರೆಯಲ್ಲಿ ಏನು ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದರು.

‘ಬಾಗಲಕೋಟೆ ಕ್ಷೇತ್ರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ರಾಜ್ಯಮಟ್ಟದ ನಾಯಕರೂ ಗೆಲುವಿಗೆ ಕೈಜೋಡಿಸಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಚುನಾವಣಾ ಆಯೋಗ ನಿಗದಿ ಪಡಿಸಿದ ಮಿತಿಯಲ್ಲಿಯೇ ವೆಚ್ಚ ಮಾಡಿದ್ದೇವೆ’ ಎಂದು ಹೇಳಿದರು.

ಮುಖಂಡರಾದ ನಾಗರಾಜ ಹದ್ಲಿ, ಚಂದ್ರಶೇಖರ ರಾಠೋಡ, ಶ್ರೀನಿವಾಸ ಬಳ್ಳಾರಿ, ರಾಜು ಮನ್ನಿಕೇರಿ, ಅಕ್ಬರ್ ಮುಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-445041134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.