ಬಾಗಲಕೋಟೆ: ಗೋವುಗಳನ್ನು ಅಕ್ರಮವಾಗಿ ಸಾಗಾಟ ಮತ್ತು ವಧೆ ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರಾದ ಕುಮಾರಸ್ವಾಮಿ, ಯಂಕಣ್ಣ ಕಳ್ಳಿಗುದ್ದಿ, ‘ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳ ಸಾಗಾಟ ಹೆಚ್ಚಾಗಿದೆ. ಈಗಾಗಲೇ ಕಸಾಯಿಖಾನೆಗಳ ಪಟ್ಟಿಯನ್ನು ನೀಡಲಾಗಿದೆ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಬಾದಾಮಿ, ಲೋಕಾಪುರ, ಇಳಕಲ್, ಜಮಖಂಡಿ, ಕೆರೂರ ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಗೋವುಗಳ ವಧೆ ಮಾಡಲಾಗುತ್ತಿದೆ. ಗೋಹತ್ಯೆ ಕಾಯಿದೆ ಜಾರಿಯಲ್ಲಿದೆಯೋ, ಇಲ್ಲವೋ ಎಂಬ ಅನುಮಾನ ಮೂಡುವ ಪರಿಸ್ಥಿತಿ ಎದುರಾಗಿದೆ’ ಎಂದರು.

‘2023ರಲ್ಲಿ ಗೋಹತ್ಯೆ ಕಾಯಿದೆ ಜಾರಿಯಾದ ಮೇಲೆ ಎಷ್ಟು ಪ್ರಕರಣಗಳು ದಾಖಲಾಗಿವೆ. ಗೋಹತ್ಯೆ ಮಾಡಿದರೆ ಏನು ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು. ಕ್ರಮಕೈಗೊಳ್ಳದಿದ್ದರೆ, ತಡೆಯುವ ಕೆಲಸವನ್ನು ಮಾಡಬೇಕಾಗುತ್ತದೆ. ಆಗ ಆಗುವ ಅನಾಹುತಕ್ಕೆ ಇಲಾಖೆಯೇ ಕಾರಣವಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಅರುಣ ಕಟ್ಟಿಮನಿ, ನಾಗರಾಜ ಅಂಬಿಗೇರ, ಕೃಷ್ಣಾ ಅಸರಟ್ಟಿ ಇದ್ದರು.

ಗಿರೀಶ ಫೌಂಡೇಷನ್ ಮನವಿ: ಗೋ ಹತ್ಯೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತಿದೆ. ಗೋವು ಹತ್ಯೆ ತಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರಿಗೆ ಫೌಂಡೇಷನ್ ವತಿಯಿಂದ ಮನವಿ ಸಲ್ಲಿಸಲಾಯಿತು.

ಗೋಹತ್ಯೆ ನಡೆಯುತ್ತಿರುವ ಕುರಿತು ಹಲವು ಬಾರಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೂ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ವಿಶೇಷ ನಿಗಾವಹಿಸಿ ಅಕ್ರಮ ಗೋ ಹತ್ಯೆ ತಡಬೇಕು ಎಂದು ಕೋರಲಾಯಿತು.

ಇಂತಹ ಕಾನೂನುಬಾಹಿರ ಚಟುವಟಿಕೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಸವಾಲಾಗುವುದರ ಜೊತೆಗೆ ಕೋಮು ಸೌಹಾರ್ದ ಭಂಗವಾಗುವ ಪರಿಸ್ಥಿತಿ ನಿರ್ಮಾಣ ಆಗುವ ಸಾಧ್ಯತೆ ಇದೆ. ಹಿಂದೂ ಸಮಾಜದ ಧಾರ್ಮಿಕ ಭಾವನೆಗಳ ರಕ್ಷಣೆಯ ಹಿತದೃಷ್ಟಿಯಿಂದ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಗಿರೀಶ ಭಾಂಡಗೆ, ಸಂತೋಷ ಜೋಶಿ, ಚಂದ್ರು ರಾಮೋಡಗಿ, ಶಂಕರ ಗಲಗ, ರಾಜು ಶಿಂತ್ರೆ, ಭೀಮಶಿ ಮೊರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-19-1963070965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.