ಬಾಗಲಕೋಟೆ: ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಗ್ಯಾಸ್ ಸಿಲಿಂಡರ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬುಧವಾರ ಗ್ಯಾಸ್ ವಿತರಕ ಕಂಪನಿಗಳು ಹಾಗೂ ಪೆಟ್ರೋಲ್, ಡೀಸೆಲ್ ಬಂಕ್ ಪ್ರತಿನಿಧಿಗಳೊಂದಿಗೆ ಸಭೆ ಜರುಗಿಸಿ ಮಾತನಾಡಿದ ಅವರು, ಜನರು ಭಯಭೀತರಾಗಿ ಅನಗತ್ಯವಾಗಿ ಗ್ಯಾಸ್ ಬುಕ್ ಮಾಡಿ ಗೊಂದಲವುಂಟು ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದೀರಿ ಆದರೆ ವಾಸ್ತವದಲ್ಲಿ ಗ್ರಾಹಕರು ಗ್ಯಾಸ್ ಬುಕ್ ಮಾಡಿ ಒಂದು ವಾರ, ತಿಂಗಳಾದರೂ ಸಿಲಿಂಡರ್ ಪೂರೈಸಿರುವುದಿಲ್ಲವೆಂದು ದೂರುತ್ತಿದ್ದಾರೆ. ಆದ್ದರಿಂದಾಗಿ ಗೃಹಬಳಕೆಯ ಗ್ಯಾಸ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವನ್ನು ಆದ್ಯತೆಯ ಮೇಲೆ ಸರಿಪಡಿಸಬೇಕು ಎಂದು ಹೇಳಿದರು.

ಎರಡು ದಿನಗಳಲ್ಲಿ ಶಾಲೆಗಳು ಆರಂಭವಾಗಲಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ಒದಗಿಸಲು ಸಿಲಿಂಡರ್ಗಳ ಅವಶ್ಯಕತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳು ಹಾಗೂ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳಿಗೆ ಅಗತ್ಯವಾದ ಗ್ಯಾಸ್ ಸಂಪರ್ಕಗಳನ್ನು ಒದಗಿಸಬೇಕು. ಶಾಲೆ ಮತ್ತು ವಸತಿ ನಿಲಯಗಳಿಗೆ ಸಿಲಿಂಡರ್ ಒದಗಿಸುವಲ್ಲಿ ಒಟಿಪಿ ಕಡ್ಡಾಯ ಮಾಡಿದಲ್ಲಿ ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ಗಳು ಸಹ ತಮ್ಮ ಗೃಹ ಬಳಕೆ ಗ್ಯಾಸ್ ಸಂಪರ್ಕ ಹೊಂದಿರುತ್ತಾರೆ. ಆಗ ಸಮಸ್ಯೆಯಾಗುವುದರಿಂದ ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯ ಕೆಲವು ಪೆಟ್ರೋಲ್ ಬಂಕಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸ್ಟಾಕ್ ಇದ್ದರೂ ಕೂಡ ಪೆಟ್ರೋಲ್ ಲಭ್ಯವಿರುವದಿಲ್ಲ ಎಂಬ ಫಲಕಗಳನ್ನು ಅಳವಡಿಸಿರುವುದಾಗಿ ಜಿಲ್ಲಾಡಳಿತಕ್ಕೆ ಮಾಧ್ಯಮದವರು ತಿಳಿಸುತ್ತಿದ್ದು, ಈ ರೀತಿ ಮಾಡುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪ್ರತಿ ದಿನ ಲಭ್ಯವಿರುವ ಇಂಧನ ಹಾಗೂ ಆಯಾ ದಿನದ ಇಂಧನ ದರವನ್ನು ಬಂಕ್ ಗಳಲ್ಲಿ ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುತ್ತಿದ್ದು ರೈತರು ಬಿತ್ತನೆಗಾಗಿ ಸಜ್ಜುಗೊಳ್ಳುತ್ತಿದ್ದಾರೆ. ಸಾಕಷ್ಟು ಸಂಖ್ಯೆಯ ರೈತರು ಭೂಮಿ ಉಳುಮೆಗಾಗಿ ಟ್ಯಾಕ್ಟರ್ ಬಳಸುತ್ತಿದ್ದು ರೈತರಿಗೆ ತೊಂದರೆ ಉಂಟು ಮಾಡದೆ ಪೆಟ್ರೋಲ್ ಡೀಸೆಲ್ ನೀಡಿ ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕನವಾಡಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಜೀತ್ ಮನ್ನಿಕೇರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸದಾಶಿವ ಬಡಿಗೇರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪಂಕಜಾ ಜೋಶಿ. ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-19-636051867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.