ಬಾಗಲಕೋಟೆ: ಪ್ರಸಕ್ತ ಬೇಸಿಗೆ ಕಾಲದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಅಗತ್ಯಕ್ಕೆ ತಕ್ಕಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ

ಕುಡಿಯುವ ನೀರಿಗೆ ಸಂಬಂಧಿ ಸಿದ ಸಮಸ್ಯೆಗಳಿಗೆ ಗ್ರಾಮಸ್ಥರಿಗೆ ಶೀಘ್ರವಾಗಿ ಸ್ಪಂದಿಸಲು ಮತ್ತು ಕುಂದುಕೊರತೆ ಪರಿಹರಿಸಲು ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.

ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕಂಡುಬರುವ ತೊಂದರೆಗಳನ್ನು ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ.

ಜಿಲ್ಲಾ ಪಂಚಾಯಿತಿ ಕಾರ್ಯಾಲಯ (08354-200180), ಕಾರ್ಯನಿರ್ವಾಹಕ ಎಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ (94822 73638), ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಪ ವಿಭಾಗ ಕಚೇರಿ ಬಾಗಲಕೋಟೆ (99168 89472), ಬಾದಾಮಿ ಮತ್ತು ಗುಳೇದಗುಡ್ಡ (94800 31005), ಬೀಳಗಿ (99024 36899), ಹುನಗುಂದ ಮತ್ತು ಇಳಕಲ್ (94489 47542), ಜಮಖಂಡಿ ಮತ್ತು ರಬಕವಿ-ಬನಹಟ್ಟಿ (93805 09080), ಮುಧೋಳ (95914 21346) ಕರೆ ಮಾಡಬಹುದಾಗಿದೆ.

ಸಹಾಯವಾಣಿ ಕೇಂದ್ರಗಳಲ್ಲಿ ದಾಖಲಾಗುವ ದೂರುಗಳಿಗೆ ಸಮಸ್ಯೆ ನಿವಾರಣೆಗೆ ತುರ್ತಾಗಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಜಿಲ್ಲೆಯ ಗ್ರಾಮೀಣ ಭಾಗದ ಜನರು ಸಹಾಯವಾಣಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-19-1755293669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.