ಬಾಗಲಕೋಟೆ: ‘ಬೇಸಿಗೆಯ ಕಾಲ ಪ್ರಾರಂಭವಾಗಿದ್ದು, ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಕುಡಿಯುವ ನೀರು ಸರಬರಾಜು ಕುರಿತು ವಿಡಿಯೊ ಸಂವಾದ ನಡೆಸಿದ ಅವರು, ‘ಯಾವ, ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ತಿಳಿದುಕೊಂಡು ಪರಿಹಾರ ಕಂಡುಕೊಳ್ಳಬೇಕು’ ಎಂದರು.

‘ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ದೂರು ಬಂದರೂ 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಬೇಕು. ಪಂಚಾಯಿತಿಯ ಕೊಳವೆಬಾವಿ ನೀರು ಬಳಕೆಗೆ ಯೋಗ್ಯವಲ್ಲ ಎಂದು ಕಂಡು ಬಂದಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆದು, ಸರಬರಾಜು ಮಾಡಬೇಕು’ ಎಂದು ಸೂಚಿಸಿದರು.

‘ಒವರ್ ಹೆಡ್ ಟ್ಯಾಂಕ್ಗಳು ಶಿಥಿಲಗೊಂಡಿದ್ದರೆ, ದುರಸ್ತಿ ಮಾಡಿಸಿಕೊಡಲಾಗುವುದು. ಹೊಸ ಕೊಳವೆಬಾವಿಗಳನ್ನು ಕೊರೆಯಲು ಅವಕಾಶವಿರುವುದಿಲ್ಲ. ಕೇವಲ ಬೇಸಿಗೆ ಸಮಸ್ಯೆಗಾಗಿ ಹೊಸ ಕೊಳವೆಬಾವಿ ಕೊರೆಯಿಸುವ ಕಾರ್ಯ ಸೂಕ್ತವಲ್ಲ’ ಎಂದರು.

‘ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿಯಲ್ಲಿದ್ದು, ಜನಬಳಕೆಗೆ ಸದಾಕಾಲ ದೊರೆಯುವಂತೆ ಅಗತ್ಯ ಕ್ರಮವಹಿಸಿರಿ. ಗ್ರಾಮಗಳಲ್ಲಿನ ಎಲ್ಲ ಜಲಮೂಲಗಳ ಸುತ್ತಲಿನ ಪ್ರದೇಶದಲ್ಲಿ ಇರಬಹುದಾದ ತ್ಯಾಜ್ಯ ಹಾಗೂ ಚರಂಡಿ ನೀರನ್ನು ಸರಿಯಾಗಿ ಹೋಗುವಂತೆ ಮಾಡಿ ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

‘ಬಹುಗ್ರಾಮ ನೀರು ಸರಬರಾಜು ಮಾಡುವ ಒವರ್ ಹೆಡ್ ಟ್ಯಾಂಕ್ ಗಳನ್ನು ಕಾಲ, ಕಾಲಕ್ಕೆ ಸ್ವಚ್ಛಗೊಳಿಸಿ, ರೋಗಾಣು, ಬ್ಯಾಕ್ಟೀರಿಯಾ ಅಥವಾ ಫಂಗಸ್ ಸೇರದಂತೆ ನೋಡಿಕೊಳ್ಳಬೇಕು. ಜಲಸಂಗ್ರಹಾರಗಳನ್ನು ಸ್ವಚ್ಛಗೊಳಿಸಿ, ವೈಜ್ಞಾನಿಕ ರೀತಿಯಲ್ಲಿ ಕ್ಲೋರಿನೇಷನ್ ಮಾಡಿ ಸ್ವಚ್ಛಗೊಳಿಸಬೇಕು‘ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಆಕಾಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-19-18696291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.