ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಭ್ರಷ್ಟಾಚಾರದ ಮೂಲಕ ಅನೈತಿಕವಾಗಿ ಗೆಲುವು ಸಾಧಿಸಿದ ಉಮೇಶ ಮೇಟಿ, ಸಚಿವ ಸತೀಶ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆಆರ್ಎಸ್ ಅಭ್ಯರ್ಥಿಯಾಗಿದ್ದ ನಾಗರಾಜ ಕಲಕುಟಕರ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ಮಾಡಿದರು.

ಬಾಗಲಕೋಟೆಯಲ್ಲಿ ಮಾತ್ರವಲ್ಲ, ಭಾರತದಲ್ಲಿ ಚುನಾವಣಾ ಆಯೋಗ ನ್ಯಾಯಯುತ, ಪಾರದರ್ಶಕ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾವಣೆಗಳನ್ನು ನಡೆಸುತ್ತಿಲ್ಲ. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಅಧಿಕಾರ ನಡೆಸಿರುವ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಚುನಾವಣಾ ಭ್ರಷ್ಟಚಾರವೆಸಗಿದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ದೂರಿದರು. ಚುನಾವಣಾ ನೀತಿ ಸಂಹಿತೆ, ಕಾನೂನು ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿದರೂ ಯಾವುದೇ ಕಠಿಣ ಕ್ರಮ ಕೈಗೊಳ್ಳದೇ ಭ್ರಷ್ಟ ರಾಜಕೀಯ ಪಕ್ಷಗಳ ಪರವಾಗಿ ಪರೋಕ್ಷವಾಗಿ ಚುನಾವಣಾ ಆಯೋಗ ಮತ್ತು ಅಧಿಕಾರಿಗಳು ಸಹಕಾರ ನೀಡುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.

ಚುನಾವಣೆಯನ್ನು ಸಾತ್ವಿಕ ಮಾರ್ಗಕ್ಕೆ ತಿರುಗಿಸದಿದ್ದರೆ ಮತ್ತದೇ ಭ್ರಷ್ಟರು, ಅಯೋಗ್ಯರು, ಲೂಟಿಕೋರರು ಚುನಾವಣೆಗೆ ಸ್ಪರ್ಧೆ ಮಾಡ್ತಾರೆ. ಹಣ, ಹೆಂಡ, ಸೀರೆ, ಕುಕ್ಕರ್ ಹಂಚಿ, ಜಾತಿ- ಧರ್ಮದ ಹೆಸರಲ್ಲಿ ದ್ವೇಷ ಬಿತ್ತಿ ಮತ ಪಡೆದು ನಮ್ಮನ್ನು ಗುಲಾಮರನ್ನಾಗಿ ಮಾಡಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಾರೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.