ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಣ ಹಂಚುವುದು ಹಾಗೂ ದ್ವೇಷಭಾಷಣ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಚುನಾವಣೆ ಅನೂರ್ಜಿತಗೊಳಿಸಿ, ಮರು ಚುನಾವಣೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಗರಾಜ ಕಲಕುಟಕರ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಮತದಾನದ ದಿನ ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಅಭ್ಯರ್ಥಿ ಪರವಾಗಿ ಮತ ಪಡೆಯಲು ಮತದಾರರಿಗೆ ಹಣದ ಆಮಿಷವೊಡ್ಡಿದ್ದಾರೆ. ಅದರಂತೆಯೇ ಇನ್ನೊಂದೆಡೆ ಬಿಜೆಪಿ ಮುಖಂಡರು ದ್ವೇಷಭಾಷಣ ಮಾಡಿದ್ದಾರೆ ಎಂದು ದೂರಿ ವಿಡಿಯೊ ಸಮೇತ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದರು.

‘ಅಭ್ಯರ್ಥಿ ನಾಗರಾಜ ಕಲಕುಟಕರ ಅವರು ನೀಡಿರುವ ದೂರನ್ನು ಪರಿಶೀಲಿಸಿ, ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿತ್ತು.

ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಿಂದ ಕ್ರಮಕ್ಕೆ ಕ್ಷೇತ್ರದ ಚುನಾವಣಾಧಿಕಾರಿಗೆ ಪತ್ರ ಬರೆದು, ‘ದೂರಿನ ಬಗ್ಗೆ ಕೈಗೊಂಡಿರುವ ಕ್ರಮದ ಕುರಿತು ದೂರುದಾರರಿಗೆ ಇಂದೇ ಮಾಹಿತಿ ನೀಡಿ, ಕಚೇರಿಗೆ ವರದಿ ಸಲ್ಲಿಸಬೇಕು’ ತಿಳಿಸಲಾಗಿತ್ತು.

‘ಏ.29ರಂದು ಜಿಲ್ಲಾ ಚುನಾವಣಾಧಿಕಾರಿ ಅವರು ಚುನಾವಣಾಧಿಕಾರಿಗೆ ಪತ್ರ ಬರೆದು, ಅಂದೇ ನನಗೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದರೂ ಇಲ್ಲಿಯವರೆಗೆ ಹಿಂಬರಹ ನೀಡಿರುವುದಿಲ್ಲ’ ಎಂದು ನಾಗರಾಜ ಕಲಕುಟಕರ ದೂರಿದರು.

‘ಸರಿಯಾದ ತನಿಖೆ ನಡೆಸದಿರುವುದನ್ನು ಖಂಡಿಸಿ ಶನಿವಾರದಿಂದ ಬೆಂಗಳೂರಿನಲ್ಲಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಂದೆ ಪ್ರತಿಭಟನೆ ಮುಂದುವರೆಸಲಾಗುವುದು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-19-266670214

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.