ಬಾಗಲಕೋಟೆ: ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ವ್ಯಾಪ್ತಿಯಲ್ಲಿ ಸಖಿ, ಅಂಗವಿಕಲರ ಸ್ನೇಹಿ, ಯುವ ಹಾಗೂ ಥೀಮ್ ಆಧಾರಿತ ಮತಗಟ್ಟೆ ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಅಧ್ಯಕ್ಷ ಶಶಿಧರ ಕುರೇರ ತಿಳಿಸಿದರು.

ಬುಧವಾರ ನವನಗರ ಅಂಬೇಡ್ಕರ್ ಭವನದಲ್ಲಿ ಸ್ಥಾಪಿಸಲಾದ ಸಖಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಎರಡು ಪಿಂಕ್ (ಸಖಿ), ತಲಾ ಒಂದು ಯುವ, ಅಂಗವಿಕಲರ ಸ್ನೇಹಿ ಹಾಗೂ ಥೀಮ್ ಆಧಾರಿತ ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ ಎಂದರು.

ಮತದಾನದ ಪ್ರಮಾಣ ಹೆಚ್ಚು ಮಾಡುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗಿದೆ. ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ಐದು ಬಗೆಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತಗಟ್ಟೆ ಗೋಡೆಗಳ ಮೇಲೆ ಬಗೆ ಬಗೆಯ ಚಿತ್ರಗಳ ಜೊತೆಗೆ ಮತದಾನದ ಜಾಗೃತಿ ಕುರಿತು ಘೋಷ ವಾಕ್ಯಗಳನ್ನು ಬರೆಯಲಾಗಿದೆ ಎಂದು ಹೇಳಿದರು

ಭಾರತ ದೇಶದಂತಹ ಬೃಹತ್ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವುದು ಒಂದು ಸವಾಲಿನ ಕೆಲಸ. ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ಹಲವು ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುತ್ತ ಬಂದಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಬಡದಾನಿ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ನಗರಸಭೆ ಪೌರಾಯುಕ್ತ ವಾಸಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-19-103043208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.