ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ಘೋಷಿಸಿದ್ದ ಹೊಸ ಪರಿಹಾರದಂತೆ ಎಷ್ಟು ಹಣ ಹಂಚಿಕೆ ಮಾಡಲಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಮಂಗಳವಾರ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಅನುದಾನ ವಿಷಯದಲ್ಲಿ ಬೊಗಳೆ ಹೊಡೆದುಕೊಂಡೇ ಮೂರು ವರ್ಷಗಳನ್ನು ಕಳೆದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ವಾಗ್ದಾನ ನೀಡಿದ್ದಂತೆ ರಾಜ್ಯದ ನೀರಾವರಿಗೆ ವರ್ಷಕ್ಕೆ ₹40 ಸಾವಿರ ಕೋಟಿ ನೀಡಲಿ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕುತಂತ್ರ, ಷಡ್ಯಂತ್ರ ಮಾಡುವಲ್ಲಿ ಕಾಂಗ್ರೆಸ್ ಮೆಲುಗೈ ಸಾಧಿಸಿದೆ. ರೈತರ ಬಗ್ಗೆ, ಉತ್ತರ ಕರ್ನಾಟಕ ಬಗ್ಗೆ ಕಾಳಜಿ ಇಲ್ಲ. ನೀರಾವರಿ ಯೋಜನೆಗೆ ಅನುದಾನ ನೀಡಲು ಹಣವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾತನಾಡಿ, ಅಭಿವೃದ್ಧಿ ಸಹಿಸದ ಕಾಂಗ್ರೆಸ್ ಕೇಂದ್ರದ ಮೇಲೆ ಗೂಬೆ ಕೂರಿಸಿ ಅಧಿಕಾರಕ್ಕೆ ಬರುವ ನೀಚ ಬುದ್ದಿ ಮೈಗೂಡಿಸಿಕೊಂಡಿದೆ. ಸುಳ್ಳು ಹೇಳುವುದನ್ನು ಬಿಟ್ಟು ಇನ್ನಾದರೂ ಪಾಠ ಕಲಿಯಲಿ. ವೀರಣ್ಣ ಚರಂತಿಮಠರ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಮುಖ್ಯಮಂತ್ರಿ ಬಾಗಲಕೋಟೆಯಲ್ಲಿನ ಅಭಿವೃದ್ಧಿ ಕಾರ್ಯ ಮತ್ತು ಬಿಜೆಪಿ ಪರವಾದ ಅಲೆ ಕಂಡು ಸೋಲಿನ ಭಯಕ್ಕೆ ಅರ್ಥವಿಲ್ಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಎಂ.ಡಿ. ಲಕ್ಷ್ಮೀನಾರಾಯಣ, ಶಾಸಕ ಜಗದೀಶ ಗುಡಗುಂಟಿ, ಮಾಜಿ ಸಚಿವ ರಾಜುಗೌಡ ನಾಯಕ್, ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-19-453380015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.