ಬಾಗಲಕೋಟೆ: ರಸಗೊಬ್ಬರ ನಿಯಂತ್ರಣ ಉಲ್ಲಂಘನೆ ಮಾಡಿದ ತಾಲ್ಲೂಕಿನ ಗದ್ದನಕೇರಿ ಕ್ರಾಸ್ನಲ್ಲಿರುವ ಬಸವೇಶ್ವರ ಟ್ರೇಡರ್ಸ್ ರಸಗೊಬ್ಬರ ಮಳಿಗೆಯ ಮಾರಾಟ ಪರವಾನಗಿ ಅಮಾನತು ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ತಿಳಿಸಿದ್ದಾರೆ.

ಕಲಾದಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಇತ್ತೀಚೆಗೆ ಬಸವೇಶ್ವರ ಟ್ರೇಡರ್ಸ್ ಮಳಿಗೆ ತಪಾಸಣೆ ಮಾಡಿ, ರಸಗೊಬ್ಬರ ನಿಯಂತ್ರಣ ಆದೇಶ ಉಲ್ಲಂಘಿಸಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕರಿಗೆ ವರದಿ ಸಲ್ಲಿಸಿದ್ದರು. ವರದಿ ಆಧಾರದ ಮೇಲೆ ಸಹಾಯಕ ಕೃಷಿ ನಿರ್ದೇಶಕರು ಪರವಾನಗಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರಸಗೊಬ್ಬರದ ವಿತರಣೆಗೆ ರೈತರ ಎಫ್ಐಡಿ ಕಡ್ಡಾಯಗೊಳಿಸಲಾಗಿದ್ದು, ಎಲ್ಲ ರೈತ ಬಾಂಧವರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಫ್ಐಡಿಗೆ ಎಲ್ಲ ಸರ್ವೆ ನಂಬರ್ ಜೋಡಣೆ ಮಾಡಿಕೊಳ್ಳುವಂತೆ ಕೋರಲಾಗಿದೆ.

ರಸಗೊಬ್ಬರ ಮಾರಾಟದಲ್ಲಿ ಯಾವದೇ ಅಕ್ರಮಗಳು ಮತ್ತು ಗರಿಷ್ಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಕೃಷಿ ಇಲಾಖೆಯ ಗಮನಕ್ಕೆ ತರಲು ರೈತರಲ್ಲಿ ವಿನಂತಿ ಮಾಡಲಾಗಿದೆ. ರಸಗೊಬ್ಬರದ ಅಕ್ರಮ ದಾಸ್ತಾನು, ಸಾಗಾಣಿಕೆ ಮತ್ತು ಬಳಕೆ ಕಂಡುಬಂದಲ್ಲಿ ಅಂತಹವರ ವಿರುದ್ಧ ರಸಗೊಬ್ಬರ ನಿಯಂತ್ರಣ ಆದೇಶ ಮತ್ತು ಅಗತ್ಯ ವಸ್ತುಗಳ ಕಾಯ್ದೆಯನ್ವಯ ಕಾನೂನುಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-19-482734088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.