ಬೀಳಗಿ: ಕರ್ನಾಟಕ ರಾಜ್ಯ ಗಂಗಾಮತ ನೌಕರರ ಸಂಘವು ಬೆಳ್ಳಿ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಪ್ರಯುಕ್ತ ರಾಜ್ಯದಲ್ಲಿ ಗಂಗಾಮತ ಸಮಾಜ ಬಲಿಷ್ಠಗೊಳಿಸುವ ಉದ್ದೇಶದಿಂದ ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಭಾಗಲಕೋಟೆ ನವನಗರದ ಕಲಾಭವನದಲ್ಲಿ ರಾಜ್ಯ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಉದಯಕುಮಾರ ಅಂಬಿಗೇರ ಹೇಳಿದರು.

ಪಟ್ಟಣದ ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಸಮಾರಂಭದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಚೌಡದಾನಪುರ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹಾಗೂ ಬಾಗಲಕೋಟೆ ರಾಮಾರೂಢ ಮಠದ ಪರಮರಾಮಾರೂಢ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸುವರು. ಮಾಜಿ ಸಚಿವ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಕಾರ್ಯಾಧ್ಯಕ್ಷ ಪ್ರಮೋದ ಮದ್ವರಾಜ ಪ್ರತಿಭಾ ಪುರಸ್ಕಾರ ನೀಡುವರು.

ನೌಕರ ಭವನ ಉದ್ಘಾಟನೆ ರಾಜ್ಯ ಗಂಗಾಮತಸ್ಥ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಶ್ ರೀನಿವಾಸ ಹಾಗೂ ಜಿಲ್ಲಾ ಗಂಗಾಮತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಕೋಳಿ ನೌಕರ ಭವನ ಉದ್ಘಾಟಿಸುವರು. ಲೋಕಸಭಾ ಸದಸ್ಯ ಪಿ.ಸಿ. ಗದ್ದಿಗೌಡರ ಹಾಗೂ ಶಾಸಕ ಉಮೇಶ ಮೇಟಿ ಗಂಗಾ ಪರಮೇಶ್ವರಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು ಎಂದರು.

ಬೀಳಗಿ ತಾಲ್ಲೂಕು ಗಂಗಾಮತ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ರಾಮಣ್ಣ ವಾಲಿಕಾರ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಸುಣಗಾರ, ಮುಧೋಳ ಅಧ್ಯಕ್ಷ ಪುಂಡಲೀಕ ಕರೇಣಿ, ಜಮಖಂಡಿ ಅಧ್ಯಕ್ಷ ರವಿಕುಮಾರ ಬೆಳಗಲ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪರಶುರಾಮ ಮಂಟೂರ, ಸಿ.ಆರ್.ಕೋಲಕಾರ, ಮಂಜು ಸುಣಗಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-19-1123498646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.