ಬಾಗಲಕೋಟೆ: ಬಿಸಿಲಿನ ತಾಪ ಹೆಚ್ಚಿರುವ ಕಾರಣ ಜನರು ತಂಪು ಪಾನೀಯ, ಹಣ್ಣುಗಳನ್ನು ಸೇವಿಸಬೇಕು ಎಂದು ಸಮುದಾಯ ಆರೋಗ್ಯ ವಿಭಾಗದ ಡಾ.ಯಶೋದಾ ವಿ.ಡಿ ಹೇಳಿದರು.

ಬಿವಿವಿ ಸಂಘದ ಎಸ್ ನಿಜಲಿಂಗಪ್ಪ ವೈದ್ಯಕೀಯ ಕಾಲೇಜು, ಹಾನಗಲ್ ಕುಮಾರೇಶ್ವರ ಆಸ್ಪತ್ರೆ, ಶಿರೂರ ಸಮುದಾಯ ಆರೋಗ್ಯ ವಿಭಾಗ ಮತ್ತು ಶಿವಗಂಗಾ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ಸಹಯೋಗದಲ್ಲಿ ಬಿಸಿಲಿನ ತಾಪ ಹೆಚ್ಚುತಿರುವ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ವರ್ಧಮಾನ ಮಾತನಾಡಿ, ಅತಿಸಾರ ಭೇದಿಯಿಂದ ಬಳಲುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕಾರಣ ಒಆರ್ಎಸ್ ಉಪಯೋಗಿಸಬೇಕು ಎಂದರು. ಉಪಯೋಗಿಸುವ ವಿಧಾನ ಕುರಿತು ಮಾಹಿತಿ ನೀಡಿದರು.

ಡಾ. ಪೂಜಾ ಕೊಪ್ಪ ಮಾತನಾಡಿ, ಬಿಸಿಲಿನ ತಾಪ ಹೆಚ್ಚಿರುವ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಿದರು. ಡಾ.ವೈಭವಿ ಮಾತನಾಡಿ, ಪ್ರತಿ ತಿಂಗಳು ಗ್ರಾಮೀಣ ರಾಷ್ಠ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳು ನಡೆಯುತಿರುತ್ತವೆ. ಜನತೆ ಲಾಭ ಪಡೆದುಕೊಳ್ಳಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-19-1132168201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.