ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪ ಬಹಳ ಹೆಚ್ಚಾಗಿದೆ. ತಾಪದಿಂದ ತಪ್ಪಿಸಿಕೊಳ್ಳಲು ಅನುಕೂಲಸ್ಥರು ಎಸಿ (ಹವಾನಿಯಂತ್ರಿತ) ಹಾಗೂ ಉಳಿದವರು ಏರ್ ಕೂಲರ್ಗಳ ಮೊರೆ ಹೋಗುತ್ತಿದ್ದಾರೆ.

ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿಗಳಲ್ಲಿ ಜನರು ಫ್ಯಾನ್, ಏರ್ ಕೂಲರ್ ಹಾಗೂ ಎಸಿಗಳ ಖರೀದಿ ಮಾಡುತ್ತಿರುವುದು ಹೆಚ್ಚಾಗಿದೆ.

ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಮನೆಯ ಒಳಗಡೆ, ಹೊರಗಡೆ ಬಿಸಿಯಾದ ಗಾಳಿ ಮುಖಕ್ಕೆ ಹೊಡೆಯುತ್ತಿದೆ. ಫ್ಯಾನ್ ಹಚ್ಚಿದರೂ ಸಮಾಧಾನವಾಗುತ್ತಿಲ್ಲ. ಪರಿಣಾಮ ತಂಪು ವಾತಾವರಣವುಂಟು ಮಾಡುವ ಕೂಲರ್, ಎಸಿ ಖರೀದಿಗೆ ಮುಂದಾಗಿದ್ದಾರೆ.

ಹೆಚ್ಚೂ ಕಡಿಮೆ ದಿನದ 24 ಗಂಟೆಗಳ ಕಾಲವೂ ಮನೆಯಲ್ಲಿ ಫ್ಯಾನ್, ಕೂಲರ್, ಎಸಿ ಗಳನ್ನು ಆನ್ನಲ್ಲಿಡಬೇಕಾಗಿದೆ. ಇಂತಹ ಬೇಸಿಗೆಯನ್ನು ಇತ್ತೀಚಿನ ವರ್ಷಗಳಲ್ಲಿ ನೋಡಿರಲಿಲ್ಲ ಎನ್ನುತ್ತಾರೆ ಜನ.

‘ಬಿಸಿಲಿನ ತಾಪಮಾನ ಹೆಚ್ಚಾದ ಮೇಲೆ ಜನರು ಏರ್ ಕೂಲರ್ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದಾರೆ. ಏ.1ರ ನಂತರ ಹೊಸ ತೆರಿಗೆ ಅನ್ವಯವಾದ ಮೇಲೆ ಕೂಲರ್ಗಳ ಬೆಲೆಯು ಶೇ 4 ರಿಂದ 8ರವರೆಗೆ ಹೆಚ್ಚಾಗಿದೆ’ ಎನ್ನುತ್ತಾರೆ ಲೈಟ್ ಹೌಸ್ನ ಮಾಲೀಕ ಅಭಿಷೇಕ ಪಾಟೀಲ.

ತಾಪಮಾನ ಹೆಚ್ಚಳದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷವಾಗಿ ಮಕ್ಕಳು, ವೃದ್ದರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ತಡೆಗಟ್ಟಲು ಮತ್ತು ತಗ್ಗಿಸಲು ಭಾರತೀಯ ಹವಾಮಾನ ಇಲಾಖೆ ನೀಡಿದ ಸಲಹೆಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಮನವಿ ಮಾಡಿದ್ದಾರೆ.

ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು.

ಛತ್ರಿ, ಟೋಪಿ ಬಳಸಬೇಕು. ಈ ಅವಧಿಯಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೆಟೆಡ್ ತಂಪು ಪಾನೀಯಗಳನ್ನು ಕುಡಿಯುವುದು ನಿಲ್ಲಿಸಬೇಕು.

ಸಾಧ್ಯವಾದಷ್ಟು ಬಿಸಿ ಆಹಾರ ಸೇವಿಸುವುದರ ಜೊತೆಗೆ ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು, ಸಾಕುಪ್ರಾಣಿಗಳನ್ನು ಬಿಡಬಾರದು. ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಪಾನೀಯಗಳು ಮತ್ತು ಓಆರ್ಎಸ್ ಬಳಸಬೇಕು.

ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.

ಕಾಯಿಲೆಗೆ ಪ್ರಥಮ ಚಿಕಿತ್ಸೆ:ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನಡಿ ಕೂಡಿಸಿ ಒದ್ದೆ ಬಟ್ಟಿಯಿಂದ ಮೈ ಒರೆಸಬೇಕು. ದೇಹದ ಉಷ್ಣತೆ ತಗ್ಗಿಸಿ ತಲೆಯ ಮೇಲೆ ನೀರು ಹಾಕುವುದು. ಓಆರ್ಎಸ್, ನಿಂಬೆಪಾನಕ ನೀಡಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-1823923464

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.