ಬಾಗಲಕೋಟೆ: ‘ರಾಷ್ಟ್ರೀಯ ಹೆದ್ದಾರಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸುರಕ್ಷತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸುರಕ್ಷತೆ, ಆತಿಕ್ರಮಣಗಳ ತೆರವು ಹಾಗೂ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿರುವ ಆದೇಶಗಳ ಅನುಷ್ಠಾನ ಕುರಿತು ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಉಂಟಾಗುವ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

‘ರಾಷ್ಟ್ರೀಯ ಹೆದ್ದಾರಿ ಪಕ್ಕದ ಅನಧಿಕೃತ, ಆಕ್ರಮ ಅಂಗಡಿ, ಕಟ್ಟಡಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮಕೈಗೊಳ್ಳಬೇಕು. ಹೆದ್ದಾರಿ ವ್ಯಾಪ್ತಿಯಲ್ಲಿ ಗೊತ್ತುಪಡಿಸಿದ ಬೇ, ಲೇ-ಬೈ ಅಥವಾ ವೇಸೈಡ್ ಸೌಲಭ್ಯ ಹೊರತುಪಡಿಸಿ ನಿಲ್ಲಿಸುವುದನ್ನು ತಡೆಯಬೇಕು’ ಎಂದು ಹೇಳಿದರು.

‘ಪೊಲೀಸ್ ಇಲಾಖೆ ಜೊತೆಗೆ ಇತರೆ ಇಲಾಖೆಯೊಂದಿಗೆ ಜಂಟಿಯಾಗಿ ತಪಾಸಣೆ ಮತ್ತು ಗಸ್ತು ತಿರುಗುವ ಕೆಲಸ ಮಾಡಬೇಕು. ಅತಿಕ್ರಮಣ ದೂರುಗಳಿಗಾಗಿ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1033 ಕರೆ ಮಾಡಬಹುದಾಗಿದೆ’ ಎಂದು ತಿಳಿಸಿದರು.

‘ಅಪಘಾತ ವಲಯಗಳಲ್ಲಿ (ಬ್ಲಾಕ್ ಸ್ಪಾಟ್) ಸೂಕ್ತ ಸೂಚನಾ ಫಲಕ, ಬೀದಿ ದೀಪ, ವೇಗ ನಿಯಂತ್ರಣ ಕ್ರಮ ಹಾಗೂ ರಸ್ತೆ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಸುಪ್ರೀಂಕೋರ್ಟ್ ನಿರ್ದೇಶನದಂತೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್, ಲೋಕೋಪಯೋಗಿ, ಸಾರಿಗೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ಹೆದ್ದಾರಿ ಸುರಕ್ಷತಾ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು’ ಎಂದು ಸೂಚಿಸಿದರು.

‘ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಪ್ರವೇಶ ಮಾರ್ಗಗಳು, ಅಕ್ರಮ ವಾಣಿಜ್ಯ ಚಟುವಟಿಕೆಗಳು ಹಾಗೂ ವಾಹನ ನಿಲುಗಡೆಯಿಂದ ಅಪಘಾತಗಳ ಸಾಧ್ಯತೆ ಹೆಚ್ಚುತ್ತಿರುವುದರಿಂದ ಅಂತಹ ಪ್ರಕರಣಗಳಲ್ಲಿ ಕ್ರಮಕೈಗೊಳ್ಳಬೇಕು. ರಸ್ತೆ ಅಪಘಾತಗಳಲ್ಲಿ ಸಾವಿನ ಪ್ರಮಾಣ ತಗ್ಗಿಸಲು ಜಾಗೃತಿ ಕಾರ್ಯಕ್ರಮಗಳು, ಸಂಚಾರ ನಿಯಮ ಪಾಲನೆ ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಬಲಪಡಿಸಬೇಕು’ ಎಂದು ತಿಳಿಸಿದರು.

‘ಹೆದ್ದಾರಿ ಸುರಕ್ಷತಾ ವಲಯದೊಳಗಿನ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಎನ್ಎಚ್ಎಐ, ಪಿಡಬ್ಲುಡಿ ಪೂರ್ವ ಅನುಮತಿ ಇಲ್ಲದೇ ಸ್ಥಳೀಯ ಸಂಸ್ಥೆಗಳು ಪರವಾನಗಿ ನೀಡಬಾರದು. ಜಿಲ್ಲಾ ಹೆದ್ದಾರಿ ಸುರಕ್ಷತಾ ಕಾರ್ಯಪಡೆ ರಚಿಸಿ, ಅದರ ಮೂಲಕ ಅತಿಕ್ರಮಣ ತಡೆಯುವ ಕೆಲಸ ಆಗಬೇಕು. ಕನಿಷ್ಠ ವಿಶ್ರಾಂತಿ ಪ್ರದೇಶಗಳು, ಆಹಾರ ಸೇವೆ, ಶೌಚಾಲಯ, ಸುರಕ್ಷಿತ ಪಾರ್ಕಿಂಗ್ ವ್ಯವಸ್ಥೆ ಹೊಂದಿರುವುದನ್ನು ಪರಿಶೀಲಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರಶೇಖರ ಪಾಟೀಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಎಂಜಿನಿಯರ್ ಪವನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-19-517599290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.