ಬಾಗಲಕೋಟೆ: ಅಕ್ರಮ ಮರಳು ಗಣಿಗಾರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯ 24 ಸ್ಥಳಗಳ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿತು.

ಇದಕ್ಕೆ ಪೂರಕವಾಗಿ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ, ಬಾಗಲಕೋಟೆಯ ಉಪನಿರ್ದೇಶಕ, ಜಿಲ್ಲಾಧಿಕಾರಿ ಮತ್ತು ಐವರು ತಹಶೀಲ್ದಾರ್ಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತು.

ಜಿಲ್ಲೆಯಲ್ಲಿ ಹರಿದಿರುವ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿ ದಂಡೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ದೂರು ಆಧರಿಸಿ ಹುನಗುಂದ, ಇಳಕಲ್, ಮುಧೋಳ ಹಾಗೂ ಬಾದಾಮಿ ತಾಲ್ಲೂಕುಗಳಲ್ಲಿ ದಾಳಿ ನಡೆದಿದೆ.

ಪರಿಸರ ಕಾಯ್ದೆ ಉಲ್ಲಂಘಿಸಿ ಯಂತ್ರೋಪಕರಣಗಳನ್ನು ಬಳಸಿ ನದಿ ದಡದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿರುವುದು ದಾಳಿ ವೇಳೆ ಕಂಡುಬಂದಿದೆ.

65 ಟಿಪ್ಪರ್, 18 ಹಿಟಾಚಿ, 14 ಯಾಂತ್ರೀಕೃತ ದೋಣಿಗಳು, ಆರು ಟ್ರ್ಯಾಕ್ಟರ್ ಹಾಗೂ ಒಂದು ಜೆಸಿಬಿ ಬಳಸುತ್ತಿರುವುದು ಪತ್ತೆ ಆಗಿದೆ. ಬಾಗಲಕೋಟೆ ಸೇರಿದಂತೆ ಅಕ್ಕ–ಪಕ್ಕದ ಜಿಲ್ಲೆಗಳ ಲೋಕಾಯುಕ್ತದ 28 ಅಧಿಕಾರಿಗಳು, 90 ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-1644407615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.