ಬಾಗಲಕೋಟೆ: ‘ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಗಳಲ್ಲಿ ವಾಹನ ಸಂಚಾರದ ಸುರಕ್ಷತೆಗೆ ಅಡ್ಡಿಯಾಗಿರುವ ಅನಧಿಕೃತ ವಾಣಿಜ್ಯ ಕಟ್ಟಡಗಳು ಹಾಗೂ ಢಾಬಾಗಳನ್ನು ಗುರುತಿಸಿ ನಿಯಮಾನುಸಾರ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹೆದ್ದಾರಿ ರಸ್ತೆ ಸುರಕ್ಷತೆ ಕುರಿತು ಜರುಗಿದ ಜಿಲ್ಲಾ ಟಾಸ್ಕ್ಫೋರ್ಸ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಹೆದ್ದಾರಿ ರಸ್ತೆ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಅಪಘಾತಗಳ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಹೇಳಿದರು.

‘ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಮಾರ್ಕಿಂಗ್ ಮಾಡಿಕೊಟ್ಟಲ್ಲಿ ಲೋಕೋಪಯೋಗಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಜಂಟಿ ಸರ್ವೆ ಕೈಗೊಂಡು ಅತಿಕ್ರಮಣಗಳ ಪಟ್ಟಿ ಮಾಡಲು ಕ್ರಮವಹಿಸಬೇಕು’ ಎಂದರು.

‘ಅಪಘಾತ ಹೆಚ್ಚಾಗಿ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಚ್ಚರಿಕೆ ಫಲಕಗಳ ಅಳವಡಿಕೆ, ವೇಗ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಅನುಷ್ಠಾನಗೊಳಿಸಿದ ಬಗ್ಗೆ ಸಂಬಂಧಿಸಿದ ಇಲಾಖೆಗಳು ಮಾಹಿತಿ ನೀಡುವ ಕೆಲಸ ಆಗಬೇಕು’ ಎಂದು ಹೇಳಿದರು.

‘ಪಾರ್ಕಿಂಗ್ ವ್ಯವಸ್ಥೆ, ಮೂಲಸೌಲಭ್ಯ ಹಾಗೂ ಇತರ ಕಾರ್ಯ ಕೈಗೊಂಡ ಬಗ್ಗೆ ಅನುಸರಣಾ ವರದಿ ನೀಡಬೇಕು. ಕೆಲವೊಂದು ಹೆದ್ದಾರಿ ರಸ್ತೆಗಳಲ್ಲಿ ಬಿಳಿ ಪಟ್ಟಿ ಇರುವುದಿಲ್ಲ. ಬಿಳಿ ಪಟ್ಟಿ ಹಾಕಲು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ‘ರಸ್ತೆ ಅತಿಕ್ರಮಣ ತೆರವಿಗೆ ಪೊಲೀಸ್ ಇಲಾಖೆ ಸಹಕಾರ ನೀಡಲಿದ್ದು, ಇದಕ್ಕೂ ಮೊದಲು ಎಲ್ಲೆಲ್ಲಿ ಅತಿಕ್ರಮಣವಾಗಿದೆ ಎಂಬುದರ ಬಗ್ಗೆ ಪಟ್ಟಿ ಮಾಡಿಕೊಳ್ಳಿ. ನಂತರ ತೆರವಿಗೆ ಕ್ರಮವಹಿಸಲು ಅನುಕೂಲವಾಗುತ್ತದೆ. ಈ ಕಾರ್ಯದಲ್ಲಿ ಜಂಟಿ ಕಾರ್ಯಾಚರಣೆ ಅಗತ್ಯ’ ಎಂದು ತಿಳಿಸಿದರು.

‘ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿ ರಸ್ತೆಗಳಲ್ಲಿ ಅತಿಕ್ರಮಣಗೊಂಡ ಬಗ್ಗೆ ಮಾಹಿತಿ ನೀಡಿದಲ್ಲಿ ಪರನಾನಗಿ ಪಡೆದಿದ್ದಲ್ಲಿ ರದ್ದತಿಗೆ ಹಾಗೂ ಪರವಾನಗಿ ಕೊಡದಂತೆ ಕ್ರಮ ಜರುಗಿಸುವಂತೆ’ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ ಅವರಿಗೆ ತಿಳಿಸಿದರು.

ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ದುರ್ಗಾದಾಸ್, ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಕಾರ್ಯಪಾಲಕ ಎಂಜಿನಿಯರ್ ಪವನಕುಮಾರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಚಂದ್ರಶೇಖರ ಪಾಟೀಲ, ಜಿಲ್ಲಾ ಸಂಚಾರ ಅಧಿಕಾರಿ ಕೆ.ಕೆ. ಲಮಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-19-1659130826

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.