ಬಾಗಲಕೋಟೆ: ‘ಬೀಳಗಿ ತಾಲ್ಲೂಕಿನ ಹೆರಕಲ್ದಿಂದ ಆಲಮಟ್ಟಿವರೆಗೆ ವ್ಯಾಪಿಸಿರುವ ಆಲಮಟ್ಟಿ ಹಿನ್ನೀರಿನಲ್ಲಿ ಸಾಗರ ಮಾಲಾ ಯೋಜನೆಯಡಿ ರಿವರ್ ಕ್ರೂಸ್ ಪ್ರವಾಸೋದ್ಯಮ ಹಾಗೂ ಜಲ ಸಾಹಸ ಕ್ರೀಡಾ ಚಟುವಟಿಕೆಗಳ ಅಭಿವೃದ್ದಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಪ್ರವಾಸೋದ್ಯಮ ಅಭಿವೃದ್ಧಿ ವಿಷಯಗಳ ಕುರಿತು ಜರುಗಿದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಈ ಯೋಜನೆಯಡಿ ಅಂದಾಜು ₹12.20 ಕೋಟಿ ವೆಚ್ಚದಲ್ಲಿ ಕ್ರೂಸ್ ಪ್ರವಾಸೋದ್ಯಮ ಅಭಿವೃದ್ದಿ ಕಾಮಗಾರಿ ಮಾಡಲಾಗವುದು. ಈಗಾಗಲೇ ಹೆರಕಲ್ ಗ್ರಾಮ ವ್ಯಾಪ್ತಿಯ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಗುರುತಿಸಿದ 2.30 ಎಕರೆ ಜಮೀನನ್ನು ಲೀಸ್ ಮೇಲೆ ಕರ್ನಾಟಕ ಜಲಸಾರಿಗೆ ಜಲಮಂಡಳಿಗೆ 15 ದಿನಗಳಲ್ಲಿ ಹಸ್ತಾಂತರಿಸುವಂತೆ’ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಸೂಚಿಸಿದರು.

‘ಹೆರಕಲ್ದಿಂದ ಚಿಕ್ಕಸಂಗಮವರೆಗೆ ವ್ಯಾಪಿಸಿರುವ ಆಲಮಟ್ಟಿ ಹಿನ್ನೀರಿನಲ್ಲಿ ಬೋಟಿಂಗ್ ಸೇರಿದಂತೆ ಇತರೆ ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೆ ಕೆಬಿಜೆಎನ್ಎಲ್ ದಿಂದ ಅನುಮತಿ ಪಡೆಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದ ಮಾದರಿಯಲ್ಲಿ ಅನುಷ್ಠಾನಗೊಳಿಸಲು ವಿಸ್ತ್ರತ ಯೋಜನಾ ವರದಿ ಸಿದ್ದಪಡಿಸಬೇಕು. ಅರಣ್ಯ ವಸತಿ ವಿಹಾರಧಾಮ (ಜಂಗಲ್ ರೆಸಾರ್ಟ್) ನಿರ್ಮಾಣಕ್ಕೆ ಜಮೀನು ಪಡೆಯಲು’ ಪ್ರಸ್ತಾವ ಸಲ್ಲಿಸಲು ತಿಳಿಸಿದರು.

‘ಚಿಕ್ಕಸಂಗಮದ ಅಭಿವೃದ್ದಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಆಗಬೇಕು. ಆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸಬೇಕು. ಜಲ ಕ್ರೀಡೆ, ಪರಿಸರ ಪ್ರವಾಸ ತಾಣಗಳ ಅಭಿವೃದ್ಧಿಯಿಂದ ಹೊಸ ಚೈತನ್ಯ ಮೂಡಬೇಕು. ಈ ಭಾಗದಲ್ಲಿ 84 ವಿವಿಧ ಜಾತಿಯ ಪಕ್ಷಿಗಳು ವಲಸೆ ಬರುತ್ತಿದ್ದು, ಅಂದಾಜು 50 ಸಾವಿರ ಸಸಿಗಳನ್ನು ಮಳೆಗಾಲದ ಪೂರ್ವದಲ್ಲಿ ನೆಡಬೇಕು’ ಎಂದು ಅರಣ್ಯ ಇಲಾಖೆಗೆ ಸೂಚಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ ಅಹಿರೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಚೈತ್ರಾ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಕೆಬಿಜೆಎನ್ಎಲ್ ಕಾರ್ಯಪಾಲಕ ಎಂಜಿನಿಯರ್ ತಾರಾನಾಥ ದೊಡಮನಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ತಾರಾನಾಥ ರಾಠೋಡ, ತಹಶೀಲ್ದಾರ್ ವಾಸುದೇವ ಸ್ಮಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-19-1067935509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.