ಬಾಗಲಕೋಟೆ: ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲೆಯಲ್ಲಿ 2,252 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. 1.82 ಲಕ್ಷ ವಿದ್ಯಾರ್ಥಿಗಳಿದ್ದು, ಬಹುತೇಕ ಶಾಲೆಗಳು ಸೋಮವಾರದಿಂದಲೇ ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಯ ಕೊಠಡಿ, ಶಾಲಾ ಆವರಣವನ್ನು ಸ್ವಚ್ಛಗೊಳಿಸಲಾಗಿದೆ. ಬಿಸಿಯೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಉಚಿತ ಪಠ್ಯಪುಸ್ತಕಗಳನ್ನು ಮೊದಲ ದಿನವೇ ವಿತರಿಸಲಾಗುತ್ತದೆ.

‘ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಡಿಡಿಪಿಐ ಎ.ಜಿ. ಮನ್ನಿಕೇರಿ ತಿಳಿಸಿದರು.

ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಶಾಲಾ ಆವರಣವನ್ನು ತೋರಣ, ಬಲೂನ್ಗಳಿಂದ ಅಲಂಕಾರಗೊಳಿಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಲಭ್ಯಗಳೊಂದಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಉತ್ತಮ ಗುಣಮಟ್ಟದ ಶೂ ಹಾಗೂ ಸಾಕ್ಸ್ ನೀಡಲಾಗುತ್ತಿದೆ. ಈ ವರ್ಷದಿಂದ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಕಲಿಕೆ ಪ್ರಾರಂಭಿಸಲಾಗುತ್ತಿದೆ.

ಕೆ.ಜಿ.ಎಸ್, ಪಿ.ಎಂ.ಶ್ರೀ, ಆದರ್ಶ ವಿದ್ಯಾಲಯ ಹಾಗೂ ಕೆ.ಜಿ.ಬಿ.ವಿ ಗಳಂತಹ ಮಾದರಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ರಾಗಿ ಮಾಲ್ಟ್, ಸಕ್ಕರೆ ಮಿಶ್ರಿತ ಹಾಲು, ಮಧ್ಯಾಹ್ನ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣುಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಗ್ರಂಥಾಲಯ, ಪ್ರಯೋಗಾಲಯ, ಸ್ಮಾರ್ಟ್ ಕ್ಲಾಸ್ ಸೌಲಭ್ಯವನ್ನು ಶಾಲೆಗಳಲ್ಲಿ ಕಲ್ಪಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಪಾಲಕರಿಗೆ ಆರ್ಥಿಕ ಹೊರೆ ಇರುವುದಿಲ್ಲ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಸಿ.ಮನ್ನಿಕೇರಿ ತಮ್ಮ ತಂಡದೊಂದಿಗೆ ಮನೆ, ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-19-1425519465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.