ವಿಜ್ಞಾನ ಕೇಂದ್ರಕ್ಕೆ ಶ್ರೀಘ್ರ ನಕ್ಷತ್ರ ಲೋಕ

ಬುಧವಾರ, ಮೇ 22, 2019
34 °C
ವಿಜ್ಞಾನದ ಅರಿವು ಮೂಡಿಸುವ ಉದ್ದೇಶದ ಉಪ‍ಪ್ರಾದೇಶಿಕ ವಿಜ್ಞಾನ ಕೇಂದ್ರ

ವಿಜ್ಞಾನ ಕೇಂದ್ರಕ್ಕೆ ಶ್ರೀಘ್ರ ನಕ್ಷತ್ರ ಲೋಕ

Published:
Updated:
Prajavani

ಬಾಗಲಕೋಟೆ: ‘ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಉಪಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶೀಘ್ರವೇ ಅತ್ಯಾಧುನಿಕ ನಕ್ಷತ್ರ ಲೋಕ ಹಾಗೂ ಇತರೆ ಒಳಾಂಗಣ ವಿಜ್ಞಾನ ಉಪಕರಣಗಳನ್ನು ತರಿಸಲಾಗುತ್ತದೆ’ ಎಂದು ತೋಟಗಾರಿಕೆ ವಿಶ್ವ ವಿದ್ಯಾಲಯದ ಕುಲಪತಿ ಡಾ. ಕೆ.ಎಂ.ಇಂದಿರೇಶ ತಿಳಿಸಿದರು.

ಇಲ್ಲಿನ ತೋಟಗಾರಿಕೆ ವಿಶ್ವ ವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿಜ್ಞಾನ ಕೇಂದ್ರದ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿ, ‘ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ, ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.

‘ಈಗಾಗಲೇ ₹ 90 ಲಕ್ಷ ವೆಚ್ಚದಲ್ಲಿ ಆಧುನಿಕ ನಕ್ಷತ್ರ ಲೋಕ ಹಾಗೂ ಇತರೆ ವಿಜ್ಞಾನ ವಸ್ತುಗಳನ್ನು ಖರೀದಿಸಲು ರಾಜ್ಯ ವಿಜ್ಞಾನ ತಂತ್ರಜ್ಞಾನ ಮಂಡಳಿಯಿಂದ ಅನುಮತಿ ದೊರೆತಿದೆ’ ಎಂದರು.

ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಅಶೋಕ ಆಲೂರ ಮಾತನಾಡಿ, ‘ಈಗಾಗಲೇ ₹ 4 ಕೋಟಿ ವೆಚ್ಚದಲ್ಲಿ ಬೃಹತ್ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಜ್ಞಾನ ಕೇಂದ್ರದ ಸುತ್ತಲೂ ಉತ್ತಮ ಉದ್ಯಾನ ನಿರ್ಮಾಣಕ್ಕೆ ₹ 25 ಲಕ್ಷ ಹಾಗೂ ಪ್ರಸಕ್ತ ಸಾಲಿನ ವಿವಿಧ ಕಾರ್ಯಕ್ರಮಗಳಿಗೆ, ಸಿಬ್ಬಂದಿ ಖರ್ಚಿಗೆ ₹ 30 ಲಕ್ಷ ವ್ಯಯಿಸಲಾಗುತ್ತದೆ’ ಎಂದರು.

‘ಕಟ್ಟಡದಲ್ಲಿ ವಿವಿಧ ಗ್ಯಾಲರಿಗಳನ್ನು ಪ್ರದರ್ಶನ ಮಳಿಗೆ, ವಿವಿಧ ವಿಷಯಗಳ ಪ್ರಾತ್ಯಕ್ಷಿಕೆಗಳನ್ನು ನಿರ್ಮಿಸಲಾಗಿದೆ. ಭಾರತೀಯ ವಿಜ್ಞಾನಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು, ಜೀವ ವೈವಿಧ್ಯ, ಪರಿಸರ, ಆಹಾರ, ವಿಜ್ಞಾನ ದಿನ, ಮಹಿಳಾ ದಿನ, ಜಲದಿನಗಳನ್ನು ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಲಾಗುವುದು’ ಎಂದರು.

ಬಿವಿವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಆರ್.ಎನ್.ಹೆರಕಲ್, ಸಲಹಾ ಸಮಿತಿ ಸದಸ್ಯ ಪ್ರೊ. ಸಿ.ಜಿ.ಹವಾಲ್ದಾರ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !