ಬಾಗಲಕೋಟೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ ಸಾಲಿಗೆ ವಿವಿಧ ಕ್ರೀಡಾ ವಸತಿ ಶಾಲೆ, ನಿಲಯಗಳಿಗೆ 8ನೇ ತರಗತಿ ಹಾಗೂ ಪಿಯುಸಿ ಮಟ್ಟದ ಅರ್ಹ ಕ್ರೀಡಾಪಟುಗಳಿಗೆ ಪ್ರವೇಶ ನೀಡಲು ಜೂನ್ 1 ರಂದು ವಿಶೇಷ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.

ಜೂನ್ 1 ರಂದು ಬೆಳಿಗ್ಗೆ 9ಕ್ಕೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್, ಸೈಕ್ಲಿಂಗ್, ಕುಸ್ತಿ, ಜುಡೋ, ತುಮಕೂರು ಮಹಾತ್ಮಾ ಗಾಂಧಿ ಜಿಲ್ಲಾ ಕ್ರಿಡಾಂಗಣದಲ್ಲಿ ಅಥ್ಲೆಟಿಕ್ಸ್, ಕಬಡ್ಡಿ, ಜಿಮ್ನಾಸ್ಟಿಕ್ಸ್, ಪುಟ್ಬಾಲ್, ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬಾಸ್ಕೆಟ್ಬಾಲ್, ಬಾಕ್ಸಿಂಗ್, ಅರ್ಚರಿ, ಫೆನ್ಸಿಂಗ್ ಹಾಗೂ ಬೆಂಗಳೂರು ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರಿಡಾಂಗಣದಲ್ಲಿ ಹಾಕಿ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ರಾಜ್ಯದ ಯಾವುದೇ ಕ್ರೀಡಾಪಟುಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗಿದೆ. 8ನೇ ತರಗತಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 8ನೇ ತರಗತಿ ಪ್ರವೇಶಕ್ಕೆ ಜೂನ್-2026ಕ್ಕೆ 14 ವರ್ಷ ಒಳಗಿರಬೇಕು. ಪ್ರಥಮ ಪಿಯುಸಿ ಪ್ರವೇಶ ಬಯಸುವ ಅಭ್ಯರ್ಥಿಗಳು ಜೂನ್-2026ಕ್ಕೆ 18 ವರ್ಷದೊಳಗಿರಬೇಕು.

ಆಧಾರ್ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ ಹಾಗೂ ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ತರಬೇಕು. ಮಾಹಿತಿಗೆ ದೂಸಂ.08354-235896, 94499 59064, 87925 07212 ಸಂಪರ್ಕಿಸುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-19-2107169088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.