ಬಾಗಲಕೋಟೆ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಅಬ್ದುಸ್ ಸಲಾಂ ಪುತ್ತಿಗೆ, ಪರಿಮಳಾ ಜೈನ್ ತಂಡವು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಘಟನೆಗೆ ಸಂಬಂಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿತು.

ಸಮಾಲೋಚನಾ ಸಭೆಯಲ್ಲಿ ಘಟನೆಗೆ ಸಂಬಂಧಿಸಿ ಸಂಪೂರ್ಣ ಮಾಹಿತಿ, ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ವಿವರವಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ನಗರದಲ್ಲಿ ಶಾಂತಿ, ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಆಯೋಗದ ತಂಡ ಮಾರ್ಚ್ 3ರಂದು ಬೆಳಿಗ್ಗೆ 9ಕ್ಕೆ ಘಟನಾ ಸ್ಥಳ ಪರಿಶೀಲನೆ ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದೆ ಎಂದು ಸದಸ್ಯರು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಡಿವೈಎಸ್ಪಿ ಗಜಾನನ ಸುತಾರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ನಗರಸಭೆ ಪೌರಾಯುಕ್ತ ವಾಸಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.