ಬಾಗಲಕೋಟೆ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಸ್ತಾವಗಳನ್ನು ಬಾಕಿ ಉಳಿಸಿಕೊಳ್ಳದೇ, ಶೀಘ್ರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ, ಮಾತನಾಡಿದರು.

ಬಾದಾಮಿಯ ಅಗಸ್ತ್ಯ ಹೊಂಡದ ಸುತ್ತಮುತ್ತ ಇರುವ 96 ಮನೆಗಳ ಸ್ಥಳಾಂತರಗೊಳ್ಳುವವರೆಗೆ 20-30 ಅಡಿ ಅಳತೆ ನಿವೇಶನ ಅಭಿವೃದ್ಧಿ ಪಡಿಸಲಾಗಿದೆ. ಅದನ್ನು 30-30 ಅಡಿಗೆ ಹೆಚ್ಚಿಸುವಂತೆ ಹೇಳಿರುವುದರಿಂದ ವಿಳಂಬ ಆಗುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.

ಹೆಚ್ಚುವರಿ ಜಮೀನು ಖರೀದಿಗೆ ಬೆಲೆ ನಿರ್ಧಾರದ ಬಗ್ಗೆ ಶಾಸಕ ಭೀಮಸೇನ ಚಿಮ್ಮನಟ್ಟಿ, ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ವಿರುದ್ಧ ಅಸಮಾಧಾನ ಹೊರಹಾಕಿದರು. ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಐಹೊಳೆಯನ್ನು ಸಂಪೂರ್ಣ ಸ್ಥಳಾಂತರ ಮಾಡಬೇಕು ಎಂದು ಶಾಸಕ ಉಮೇಶ ಮೇಟಿ ಹೇಳಿದರು. ಆದರೆ, ಗ್ರಾಮವನ್ನು ಮೂರು ಹಂತಗಳಲ್ಲಿ ಸ್ಥಳಾಂತರ ಮಾಡಲು ಇಲಾಖೆ ಸಚಿವರು ಈ ಹಿಂದೆ ನಿರ್ಧಾರ ತೆಗೆದುಕೊಂಡಿದ್ದು, ಮೊದಲ ಹಂತದ ಸ್ಥಳಾಂತರಕ್ಕೆ ಜಮೀನು ಖರೀದಿಸಿದ್ದು, ಅಭಿವೃದ್ಧಿ ಪಡಿಸಲು ಪ್ರಸ್ತಾವ ಸಲ್ಲಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲೆಯ ಉಳಿದೆಡೆ ಕೈಗೊಳ್ಳುತ್ತಿರುವ ಪ್ರವಾಸೋದ್ಯಮ ಅಭಿವೃದ್ಧಿ ವಿಚಾರವಾಗಿ ಸಲ್ಲಿಸಿರುವ ಪ್ರಸ್ತಾವ ಹಾಗೂ ಅವು ಯಾವ ಹಂತದಲ್ಲಿವೆ ಎನ್ನುವ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿಯ ನಾಲ್ವರು, ಪರಿಶಿಷ್ಟ ಪಂಗಡದ ಮೂವರಿಗೆ ಮೊಬೈಲ್ ಕ್ಯಾಂಟೀನ್ ಮಂಜೂರಾಗಿದೆ. ಹೆಚ್ಚುವರಿ ಬೇಡಿಕೆ ಬಂದಿರುವುದರಿಂದ ಮತ್ತೇ ಆರು ಜನರನ್ನು ಆಯ್ಕೆ ಮಾಡಲು ಅವಕಾಶ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳಿದರು

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಪ್ರಸ್ತಾವ ಸಲ್ಲಿಕೆ ಮಾಡಿದ್ದು, ಉಳಿದ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಬೇಕು. ಸರ್ಕಾರದ ಮಟ್ಟದಲ್ಲಿ ಆಗುವಂತಿದ್ದರೆ ಶಾಸಕರು ಮತ್ತು ತಮ್ಮ ಗಮನಕ್ಕೆ ತರಬೇಕು. ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಲು ಗಮನ ಹರಿಸಬೇಕು ಎಂದು ಸಚಿವ ತಿಮ್ಮಾಪುರ ತಿಳಿಸಿದರು.

ಶಾಸಕರಾದ ಜೆ.ಟಿ.ಪಾಟೀಲ, ಜಗದೀಶ ಗುಡಗುಂಟಿ, ಪರಿಷತ್ ಸದಸ್ಯ ಹಣಮಂತ ನಿರಾಣಿ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ ಗೋಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-19-2011706757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.